ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಛಂದ calling..

ಛಂದ ಪುಸ್ತಕ ಆಹ್ವಾನ


ಕಳೆದ ಒಂಬತ್ತು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಕಳುಹಿಸಬೇಕು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವದಿಲ್ಲ.
ಆಯ್ಕೆಯಾದ ಕತೆಗಾರರಿಗೆ ಹತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2013ರ ಏಪ್ರಿಲ್ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿಧರ್ಾರ. ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ ಪುಸ್ತಕ, c/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560 076 (ದೂ. 98444 22782)
 
ಕೊನೆಯ ದಿನಾಂಕ: ಜನವರಿ 30, 2013
ಹೆಚ್ಚಿನ ವಿವರಗಳಿಗೆ: vas123u@rocketmail.com
 
 
 

‍ಲೇಖಕರು G

9 January, 2013

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading