ಜಿ ಎನ್ ಉಪಾಧ್ಯ ಅವರಿಗೆ ನರಹಳ್ಳಿ ಪ್ರಶಸ್ತಿ

ಹಿರಿಯ ಸಾಹಿತಿ, ಮುಂಬೈ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಮುಖ್ಯಸ್ಥರಾದ ಜಿ ಎನ್ ಉಪಾಧ್ಯ ಅವರಿಗೆ ೨೦೨೧ನೇ ಸಾಲಿನ ಡಾ ನರಹಳ್ಳಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿಗಳ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಡಾ. ಎಚ್. ಎಸ್ ವೆಂಕಟೇಶಮೂರ್ತಿ, ಬಿ. ಆರ್. ಲಕ್ಷ್ಮಣರಾವ್, ಲಕ್ಷ್ಮಣ ಕೊಡಸೆ, ರಜನಿ ನರಹಳ್ಳಿ, ಆನಂದರಾಮ ಉಪಾಧ್ಯ, ನ. ರವಿಕುಮಾರ್, ಸಿ. ಕೆ. ರಾಮೇಗೌಡ ಅವರನ್ನೊಳಗೊಂಡ ಸಮಿತಿಯು ಈ ಪ್ರಶಸ್ತಿಗೆ ಜಿ ಎನ್ ಉಪಾಧ್ಯ ಅವರನ್ನು ಆಯ್ಕೆ ಮಾಡಿದೆ.

ಹಿರಿಯ ವಿಮರ್ಶಕರು ಮತ್ತು ಸಂಸ್ಕೃತಿ ಚಿಂತಕರಾದ ನರಹಳ್ಳಿ  ಬಾಲಸುಬ್ರಹ್ಮಣ್ಯ ಅವರು ತಮಗೆ ಬಂದ ಪ್ರಶಸ್ತಿ ಮತ್ತು ಗೌರವಗಳ ಮೊತ್ತವನ್ನು ಇಡಿಗಂಟಾಗಿಸಿ ಅದರಿಂದ ಬರುವ ಬಡ್ಡಿಯಿಂದ ಪ್ರತಿವರ್ಷ ಪ್ರತಿಭಾನ್ವಿತ ಬರಹಗಾರರಿಗೆ ಕೊಡಲು  ಅನುವು ಮಾಡಿಕೊಟ್ಟಿದ್ದಾರೆ.

ಹಿರಿಯ ಕವಿಗಳಾದ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಅವರ ಸಮರ್ಥ ಅಧ್ಯಕ್ಷತೆಯಲ್ಲಿ ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

೨೦೧೪ನೆಯ ಸಾಲಿನಲ್ಲಿ ಟಿ. ಯಲ್ಲಪ್ಪ ಅವರಿಗೆ, ೨೦೧೫ರಲ್ಲಿ ಪಿ. ಚಂದ್ರಿಕಾ ಅವರಿಗೆ ೨೦೧೬ರಲ್ಲಿ ಎಂ. ಆರ್. ದತ್ತಾತ್ರಿ ಅವರಿಗೆ, ೨೦೧೭ರಲ್ಲಿ ವಿನಯಾ ಅವರಿಗೆ, ೨೦೧೮ರಲ್ಲಿ ರಾಜೇಂದ್ರ ಪ್ರಸಾದ್ ಅವರಿಗೆ, ೨೦೧೯ರಲ್ಲಿ ವೆಂಕಟಗಿರಿ ದಳವಾಯಿ ಅವರಿಗೆ, ೨೦೨೦ರಲ್ಲಿ ಚಿದಾನಂದ ಸಾಲಿ ಅವರಿಗೆ ಪ್ರಶಸ್ತಿಗಳನ್ನು ನೀಡಲಾಗಿತ್ತು. ಈ ವರ್ಷ ಉಡುಪಿ ಮೂಲದ ಖ್ಯಾತ ವಿಮರ್ಶಕರೂ, ಸಂಶೋಧಕರೂ ಆದ ಜಿ. ಎನ್. ಉಪಾಧ್ಯಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಡಾ. ಜಿ. ಎನ್. ಉಪಾಧ್ಯ

ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಜಿ. ಎನ್. ಉಪಾಧ್ಯ ಅವರು ಮೂಲತಃ ಉಡುಪಿ ತಾಲೂಕಿನ ಕೋಟದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ, ಮುಂಬೈ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಯನ್ನು ವರದರಾಜ ಆದ್ಯ ಬಂಗಾರದ ಪದಕ ಹಾಗೂ ಮೊದಲ ರ‍್ಯಾಂಕ್‌ನೊಂದಿಗೆ ಗಳಿಸಿಕೊಂಡರು. ಮಹಾರಾಷ್ಟ್ರದ ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ ಅವರ ಪಿಎಚ್.ಡಿ. ಮಹಾಪ್ರಬಂಧ.

ಸಾಂಸ್ಕೃತಿಕ ಅಧ್ಯಯನ, ವಿಮರ್ಶೆ, ಭಾಷಾ ವಿಜ್ಞಾನ ಮತ್ತು ಪತ್ರಿಕೋದ್ಯಮ ಅವರ ಆಸಕ್ತಿಯ ಕ್ಷೇತ್ರಗಳು. ಸೊಲ್ಲಾಪುರ ಒಂದು ಸಾಂಸ್ಕೃತಿಕ ಅಧ್ಯಯನ, ಮಹಾರಾಷ್ಟ್ರದ ಕನ್ನಡ ಶಾಸನಗಳ ವರ್ಣಾನಾತ್ಮಕ ಸೂಚಿ, ಮಹಾರಾಷ್ಟ್ರದ ಕನ್ನಡ ಸ್ಥಳನಾಮಗಳು, ಮಹಾರಾಷ್ಟ್ರ ಕರ್ನಾಟಕ ಸಾಂಸ್ಕೃತಿಕ ಬಾಂಧವ್ಯ ಮೊದಲಾದ ಸಂಶೋಧನ ಯೋಜನೆಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಚಿತ್ರದುರ್ಗದ ಮುರುಘಾಮಠ ಅವರಿಗೆ ‘ಶಿಕ್ಷಣ ವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಿದೆ.

ಉಪಾಧ್ಯ ಅವರ ಕೃತಿಗೆ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ಶಾಂತಿಲಾಲ್ ಪ್ರಶಸ್ತಿ’ ದೊರಕಿದೆ. ಇತ್ತೀಚೆಗೆ ಅವರ ‘ಮಹಾರಾಷ್ಟ್ರ ಕರ್ನಾಟಕ ಆದಾನ ಪ್ರದಾನ’ ಕೃತಿಗೆ ಗದ್ಯ ವಿಭಾಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ‘ರತ್ನಾಕರವರ್ಣಿ ಮುದ್ದಣ ಅನಾಮಿಕ ದತ್ತಿ ಬಹುಮಾನ’ ಲಭಿಸಿದೆ. ಬಿಲ್ಲವರ ಅಸೋಸಿಯೇಷನ್ ಕೊಡ ಮಾಡುವ ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ ಅವರಿಗೆ ಸಂದಿದೆ.

ಕೆಲಕಾಲ ಅವರು ಸಂಯುಕ್ತ ಕರ್ನಾಟಕ ಪತ್ರಿಕೆಯ ಪುಸ್ತಕ ಅವಲೋಕನದ ವಿಮರ್ಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಹೊರನಾಡಾದ ಮುಂಬೈಯಲ್ಲಿ ಅಭಿಜಿತ್ ಪ್ರಕಾಶನವನ್ನು ಆರಂಭಿಸಿ ಬೇರೆ ಬೇರೆ ಲೇಖಕರ ನೂರಕ್ಕೂ ಹೆಚ್ಚು ಕೃತಿಗಳನ್ನು ಹೊರತಂದಿದ್ದಾರೆ. ಈವರೆಗೆ ಡಾ. ಉಪಾಧ್ಯ ಅವರ ಎಪ್ಪತ್ತು ಕೃತಿಗಳು ಬೆಳಕು ಕಂಡಿವೆ. ಅವರ ಮಾರ್ಗದರ್ಶನದಲ್ಲಿ ಈವರೆಗೆ ೭೦ ಮಂದಿ ಎಂ.ಫಿಲ್ ಹಾಗೂ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ.

‍ಲೇಖಕರು Admin

August 3, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

2 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: