ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

 ಟೊಟೊ ಪುರಸ್ಕಾರಕ್ಕೆ ಆಹ್ವಾನ

ಟೊಟೊ ಪುರಸ್ಕಾರ 2021

ಕನ್ನಡ ಸೃಜನಶೀಲ ಸಾಹಿತ್ಯ 

ಪ್ರವೇಶಗಳನ್ನು ಸಲ್ಲಿಸಲು ಆಹ್ವಾನ

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಹದಿನೈದು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೊತ್ಸಾಹ ನೀಡುತ್ತಾ ಬಂದಿದೆ  ಮತ್ತು  ಕನ್ನಡಕ್ಕೂ ವಿಸ್ತೃತಗೊಂಡಿದ್ದು, ಹತ್ತನೆ ವರ್ಷಕ್ಕೆ ಕಾಲಿಡಲಿದೆ. ಟಿ.ಎಫ್.ಎ. (Toto Funds the Arts) ಸ್ಥೆಯು ಆಂಗಿರಸ ‘ಟೊಟೊ’ ವೆಲ್ಲಾನಿಯ ಸ್ಮರಣಾರ್ಥ 2004 ರಲ್ಲಿ ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳು ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಕಂಡುಕೊಳ್ಳುವಲ್ಲಿ ಉತ್ತೇಜನ ಸಿಗಲೆಂಬುದು ಇದರ ಆಶಯವಾಗಿದೆ.

ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2021 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೋಟೋ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ. ಈ ಪುರಸ್ಕಾರವು 50,000 ರೂಪಾಯಿಗಳ ನಗದು ಬಹುಮಾನವನ್ನು ಒಳಗೊಂಡಿದೆ.

ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು (ಓವರ್ಸೀಸ್ ಸಿಟಿಜೆನ್ ಆಫ್ ಇಂಡಿಯಾ ಚೀಟಿ ಉಳ್ಳವರು ಪ್ರವೇಶಕ್ಕೆ ಅರ್ಹರಾಗಿರುವುದಿಲ್ಲ)

ಹಾಗೂ 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಅಂದರೆ, ಜನವರಿ 1, 1991  ರ ನಂತರ ಹುಟ್ಟಿದವರಾಗಿದ್ದಲ್ಲಿ ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗಳನ್ನು  ಕಳಿಸಲು ಅರ್ಹರು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಪ್ರವೇಶಗಳನ್ನು ಕಳಿಸಬಹುದು.  ಈ/ಮೂರು/ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗುತ್ತದೆ. ಈ ಆಯ್ಕೆಯನ್ನು ಕನ್ನಡದ ಹಿರಿಯ ಬರಹಗಾರರ ಸಮಿತಿಯು ಪ್ರತಿ ವರ್ಷದಂತೆ ಮಾಡಲಿದೆ.

ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ:  31 ಆಗಸ್ಟ್,  2020

ವಿವರಗಳಿಗಾಗಿ ನೋಡಿ: http://totofundsthearts.blogspot.in/

ಪ್ರವೇಶಗಳನ್ನು ಈಮೇಲ್ ಮೂಲಕ ಮಾತ್ರ ಕಳಿಸಬಹುದು. ನುಡಿ, ಬರಹ ಅಥವಾ ಯೂನಿಕೋಡ್ ಫಾಂಟ್ ಉಪಯೋಗಿಸಿ ಎಂ.ಎಸ್. ವರ್ಡ್ ನಲ್ಲಿ ಟೈಪ್ ಮಾಡಿ ಈ ವಿಳಾಸಕ್ಕೆ ಕಳಿಸಿ: totokannada@gmail.com

 

 

 

‍ಲೇಖಕರು avadhi

31 July, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading