ಟೊಟೊ ಪುರಸ್ಕಾರಕ್ಕೆ ಎಂಟರ್ ಆಗಿ

ಕನ್ನಡ ಯುವ ಬರಹಗಾರರಿಗೆ ಟಿ.ಎಫ್.ಎ ಪುರಸ್ಕಾರ

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಕಳೆದ  ಎಂಟು ವರ್ಷಗಳಿಂದ ಕನ್ನಡಕ್ಕೂ ವಿಸ್ತಾರಗೊಂಡಿದೆ. ಈ ಪ್ರಶಸ್ತಿಯನ್ನು ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts  – TFA) ಸಂಸ್ಥೆಯು ಸ್ಥಾಪಿಸಿ ನಿರ್ವಹಿಸುತ್ತಿದೆ. ಈ ಪ್ರಶಸ್ತಿಯು ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾಗಿದೆ. ಪುರಸ್ಕೃತರು ೩೦೦೦೦ ರೂಪಾಯಿಗಳ ನಗದು ಬಹುಮಾನವನ್ನು ಪಡೆಯುವರು.

೨೦೧೮ ನೇ ಸಾಲಿನ ಎಂಟನೆಯ ಕನ್ನಡ ಟೊಟೊ ಪುರಸ್ಕಾರಕ್ಕಾಗಿ ಟಿ.ಎಫ್.ಎ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ. ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು ಹಾಗೂ ೧೮ ರಿಂದ ೨೯ ವರ್ಷ ವಯಸ್ಸಿನವರಾಗಿರಬೇಕು. ೧ ಜನವರಿ ೧೯೮೮ ರ ನಂತರ ಹುಟ್ಟಿದವರು ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗಳನ್ನು ಕಳಿಸಲು ಅರ್ಹರು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದ ಕನ್ನಡ ರಚನೆಗಳನ್ನು ಪ್ರವೇಶಗಳಾಗಿ ಕಳಿಸಬಹುದು. ಪುರಸ್ಕಾರದ ಆಯ್ಕೆಯನ್ನು ಕನ್ನಡದ ಹಿರಿಯ ಬರಹಗಾರರ ಸಮಿತಿಯು ಮಾಡಲಿದೆ. ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ: ೧೮ ಅಗಸ್ಟ್ ೨೦೧೭

ಟಿ.ಎಫ್.ಎ. ಸಂಸ್ಥೆಯು ಆಂಗಿರಸ ‘ಟೊಟೊ‘ ವೆಲ್ಲಾನಿಯ ಸ್ಮರಣಾರ್ಥ ೨೦೦೪ ರಲ್ಲಿ ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳಿಗೆ ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಕಂಡುಕೊಳ್ಳಲು ಉತ್ತೇಜನ ಸಿಗಲೆಂಬುದು ಇದರ ಆಶಯವಾಗಿದೆ.

ಪ್ರಶಸ್ತಿಯ ಪ್ರವೇಶದ ವಿವರಗಳನ್ನು http://totofundsthearts.blogspot.com  ಎಂಬ ಅಂತರ್ಜಾಲ ತಾಣದಿಂದ ಪಡೆಯಬಹುದು.

‍ಲೇಖಕರು Avadhi

July 20, 2017

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: