ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಟೊಟೊ ಪುರಸ್ಕಾರ 2011…

ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2011ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ. ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಬರಹಗಳನ್ನು ಕಳಿಸಬಹುದು. ಪ್ರತಿ ಬರಹವು7500 ಶಬ್ದಗಳನ್ನು ಮೀರಬಾರದು. ಕವಿತೆಗಳನ್ನು ಕಳುಹಿಸುವವರು6ರಿಂದ 10 ಕವಿತೆಗಳನ್ನು ಕಳಿಸಬಹುದು. ಕಥೆಗಳನ್ನು ಕಳಿಸುವವರು ಒಂದಕ್ಕಿಂತ ಹೆಚ್ಚು ಕತೆಗಳನ್ನು ಕಳಿಸಬಹುದು – ಆದರೆ ಎಲ್ಲ ಕತೆಗಳೂ ಸೇರಿ 7500 ಶಬ್ದಗಳನ್ನು ಮೀರಬಾರದು ಬರಹಗಳನ್ನು ಕಳುಹಿಸಲು ಕೊನೆಯ ದಿನಾಂಕ: 15 ಅಕ್ಟೋಬರ್ 2010 ಇನ್ನಷ್ಟು ವಿವರಗಳಿಗೆ-ಭೇಟಿ ಕೊಡಿ http://www.totofundsthearts.blogspot.com/ ಬರಹಗಳನ್ನು ಕಳುಹಿಸಬೇಕಾದ ವಿಳಾಸ Toto Funds the Arts (TFA) H 301, Adarsh Gardens, 8th Block, 47th Cross, Jayanagar, Bangalore 560 082 Phone 080 26990549]]>

‍ಲೇಖಕರು avadhi

28 August, 2010

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading