ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

’ಡಬ್ಬಿ೦ಗ್’ ಹೀಗೂ ಒ೦ದು ದನಿ

– ರ೦ಜಿತ್ ಅಡಿಗ

ನೀಲಿ ಹೂವು

ನಾನು ಹಾಸ್ಟೆಲ್ ನಲ್ಲಿ ಓದುತ್ತಿದ್ದ ಸಮಯ. ಜತೆಗಾರರೆಲ್ಲರೂ ಕೋಲಾರದಿಂದ ಬಂದವರು. ತೆಲುಗು ಭಾಷೆ ಅವರಿಗೆ ಕರತಲಾಮಲಕ. ಸಿನೆಮಾ ಬಗ್ಗೆ ಮಾತಾಡುವಾಗೆಲ್ಲಾ ರಾಜೇಂದ್ರ ಪ್ರಸಾದ್, ಬ್ರಹ್ಮಾನಂದಂ ರ ಹಾಸ್ಯ ದೃಶ್ಯಗಳನ್ನು ವಿವರಿಸುತ್ತಿದ್ದರೆ ಬಿದ್ದು ಬಿದ್ದು ನಗುವಂತಾಗುತ್ತಿತ್ತು. ಅವರ ಹಾಸ್ಯ ಸಿನೆಮಾಗಳನ್ನು ನೋಡಲಿಕ್ಕಾಗಿಯೇ ನಾನು ತೆಲುಗು ಭಾಷೆ ಕಲಿತಿದ್ದಾಯಿತು. ಸ್ವಲ್ಪ ವರ್ಷಗಳ ಬಳಿಕ ವಡಿವೇಲು, ವಿವೇಕ್ ರ ಹಾಸ್ಯ ದೃಶ್ಯಗಳಿಗಾಗಿ ತಮಿಳೂ ಕಲಿತಿದ್ದಾಯಿತು. ಈಗ ಮಲೆಯಾಳಮ್ ಚಿತ್ರಗಳ ಕತೆಗಳ ಸೊಗಸನ್ನು ಕೇಳಿ ಮಲೆಯಾಳಮ್ ಕೂಡ ಕಲಿಯಬೇಕನ್ನಿಸುತ್ತಿದೆ. ಒಂದು ವೇಳೆ ಆ ಚಿತ್ರಗಳು ಕನ್ನಡಕ್ಕೆ ಡಬ್ ಆಗಿದ್ದಿದ್ದರೆ ನಾನು ತೆಲುಗು, ತಮಿಳು ಕಲಿವ ಅಗತ್ಯತೆ ಇತ್ತಾ? ಮಲೆಯಾಳಮ್ ಕಲಿವ ಆಸೆ ಹುಟ್ಟುತ್ತಿತ್ತಾ? ಹಾಗಂತ ನಾನು ಡಬ್ಬಿಂಗ್ ಪರವಾ? ಅಥವ ವಿರೋಧಿಯಾ? ಈಗಲೂ ಡಬ್ಬಿಂಗ್ ಬಂದರೆ ಮಲೆಯಾಳಮ್ ಕಲಿವ ಆಸೆಯನ್ನು ಕೈಬಿಡುತ್ತೇನೆ ಮತ್ತು ಡಬ್ಬಿಂಗ್ ಬರದಿದ್ದರೆ ಮಲೆಯಾಳಮ್ ಕಲಿಯುತ್ತೇನೆ. ಮತ್ತು ನನಗೆ ಬರುವ ಹಿಂದಿ ಭಾಷೆಯ, ತಮಿಳಿನ, ತೆಲುಗಿನ, ಇಂಗ್ಲೀಷ್ ನ ಯಾವ ಡಬ್ಬಿಂಗ್ ಆದ ಸಿನೆಮಾವನ್ನೂ ನೋಡಲಾರೆ. ಕನ್ನಡ ಮಾತಾಡುವ ಆರ್ನಾಲ್ಡ್ ಶ್ವಾಜ್ನಗರ್ ಚಿತ್ರ, ಕನ್ನಡ ಮಾತಾಡುವ ವಿಲ್ ಸ್ಮಿತ್ ಚಿತ್ರಗಳು ನನಗೆ ಅಪಹಾಸ್ಯ ಅನ್ನಿಸುತ್ತದೆ. ಹಾಗೇನೆ ಮಮ್ಮುಟ್ಟಿ, ಮೋಹನ್ ಲಾಲ್ ಮಾತಾಡುವ ಕನ್ನಡ ನನಗೆ ವಿಚಿತ್ರ ಅನ್ನಿಸದು, ಕಾರಣ ಮಲೆಯಾಳಿ ಭಾಷೆ ಬರುವುದಿಲ್ಲ. ಮಲೆಯಾಳಮ್ ನ ಸ್ಲಾಂಗ್, ಅದರ ಭಾಷೆಯ ಏರಿಳಿತದ ಪರಿಚಯವಿಲ್ಲವಾದ್ದರಿಂದ. ನಾನು ಡಬ್ಬಿಂಗ್ ಪರವಾ ವಿರೋಧಿಯಾ? ಗೊತ್ತಿಲ್ಲ. ಒಂದಂತೂ ನಿಜ. ನಾನು ಚಿತ್ರ ಚೆನ್ನಾಗಿದ್ದರೆ ನೋಡ್ತೇವೆ, ಇಲ್ಲಾಂದರೆ ಇಲ್ಲ. ಡಬ್ಬಿಂಗೇ ಆಗಿರಬಹುದು ಅಥವಾ ಕನ್ನಡ ಚಿತ್ರವೇ ಆಗಿರಬಹುದು- ಹೀಗೆ ಅನ್ನುವವರ ಪರ.]]>

‍ಲೇಖಕರು G

6 May, 2012

1 Comment

  1. shama, nandibetta

    beautiful ranjith. naanoo nimma para. I know malayalam very well. its a beautiful language. cinema gaagi all business needs gaagi kalithe. but ega films bekaadashtu nodthene. neevu heliddu nija. yaavudE filmannu native language nalli noduvudu ondu sogasu

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading