ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಡಾ. ಯು.ಬಿ. ರಾಜಲಕ್ಷ್ಮಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತೆ, ‘ತರಂಗ’ದ ಸಂಪಾದಕಿ ಡಾ. ಯು.ಬಿ. ರಾಜಲಕ್ಷ್ಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಡಾ. ಯು.ಬಿ. ರಾಜಲಕ್ಷ್ಮಿ ಕಳೆದ 37 ವರ್ಷಗಳಿಂದ ಪತ್ರಿಕಾರಂಗದಲ್ಲಿದ್ದಾರೆ. ಉಡುಪಿಯ ಜಿಲ್ಲೆಯ ಕಾರ್ಕಳದವರಾದ ಇವರು ಹೊಸ ದಿಗಂತ, ಮುಂಗಾರು, ಟೈಮ್ಸ್ ಆಫ್ ಡೆಕ್ಕನ್ ದಿನಪತ್ರಿಕೆಗಳಲ್ಲಿ ಕೆಲಸಮಾಡಿ 1987 ರಲ್ಲಿ ತರಂಗ ವಾರಪತ್ರಿಕೆಯಲ್ಲಿ ಸೇವೆ ಆರಂಭಿಸಿ ಈಗ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಖಾದ್ರಿ ಶಾಮಣ್ಣ ಟ್ರಸ್ಟ್ ತಿಳಿಸಿದೆ.

ಮೈಸೂರು ವಿವಿಯಲ್ಲಿ ಕನ್ನಡ ಎಂ.ಎ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪಡೆದು ಹಂಪಿ ವಿವಿಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ. ಹಲವು ಕೃತಿಗಳನ್ನು ರಚಿಸಿರುವ ಇವರು ಸಾಕ್ಷ್ಯಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಮಲೇಷ್ಯಾ ಸರ್ಕಾರದ ಆಹ್ವಾನದ ಮೇಲೆ ಅಧ್ಯಯನ ಪ್ರವಾಸ ಕೈಗೊಂಡಿದ್ದರು. ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯಗಳಲ್ಲಿ ಪರಿಣತಿ ಹೊಂದಿದ್ದಾರೆ.

ಪ್ರಶಸ್ತಿ 15 ಸಾವಿರ ರೂ. ನಗದು ಹಾಗೂ ಫಲಕ ಹೊಂದಿದೆ.

‍ಲೇಖಕರು avadhi

5 June, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading