ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಡಿ ಎಸ್ ರಾಮಸ್ವಾಮಿ ಅವರಿಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮತ್ತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ನೀಡುವ ಪ್ರಸಕ್ತ ಸಾಲಿನ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಸಾಹಿತಿ ಡಿ. ಎಸ್. ರಾಮಸ್ವಾಮಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ 10 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ ಶೆಟ್ಟಿ ತಿಳಿಸಿದ್ದಾರೆ.

ಪ್ರಶಸ್ತಿ ಆಯ್ಕೆ ಸಮಿತಿ ಡಿ. ಎಸ್. ರಾಮಸ್ವಾಮಿ ಅವರ ‘ಮೀನು ಬೇಟೆಗೆ ನಿಂತ ದೋಣಿ ಸಾಲು’ ಅಪ್ರಕಟಿತ ಕವನ ಸಂಕಲನ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಡಿ. ಎಸ್. ರಾಮಸ್ವಾಮಿ, ತರೀಕೆರೆ ಮೂಲದವರಾಗಿದ್ದು ಪ್ರಸ್ತುತ ಅರಸೀಕೆರೆ ಎಲ್.ಐ.ಸಿಯಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಪತ್ರಿಕೆಗಳ ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದಿರುವ ಅವರ 150ಕ್ಕೂ ಹೆಚ್ಚಿನ ಚಿಂತನಗಳು ಹಾಸನ, ಭದ್ರಾವತಿ ಮತ್ತು ಮೈಸೂರು ಆಕಾಶವಾಣಿಯಿಂದ ಬಿತ್ತರಗೊಂಡಿವೆ. ಅಂಡಮಾನ್ ಕುರಿತ ಅವರ ಪ್ರವಾಸ ಕಥನ ಧಾರಾವಾಹಿಯಾಗಿ ಪ್ರಸಾರಗೊಂಡಿತ್ತು.

ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಡಿ. ಸಿ. ಅನಂತಸ್ವಾಮಿ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದ ಪ್ರೊ. ಜಿ. ಎಸ್. ಶಿವರುದ್ರಪ್ಪ ಕಾವ್ಯ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಮುದ್ದಣ ಕಾವ್ಯ ಪ್ರಶಸ್ತಿ ಹಾಗೂ ವಿಭಾ ಕಾವ್ಯ ಪ್ರಶಸ್ತಿ ಲಭಿಸಿದೆ.

‍ಲೇಖಕರು Avadhi

18 June, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading