ದಾದಾಪೀರ್ ಜೈಮನ್ ಹಾಗೂ ತಮ್ಮಣ್ಣ ಬೀಗಾರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ ರ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿರ್ಶಿ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಯ ೨೦೨೨ರ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು ಐವತ್ತು ಸಾವಿರ ರುಪಾಯಿ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.

ದಾದಾಪೀರ್ ಅವರ ‘ನೀಲಕುರಿಂಜಿ ‘ ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ ತಮ್ಮಣ್ಣ ಬೀಗಾರ ಅವರ ‘ ಬಾವಲಿ ಗುಹೆ ‘ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. ‘ನೀಲಕುರಿಂಜಿ ‘ ಯನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನವು ಪ್ರಕಟಿಸಿದ್ದರೆ ‘ಬಾವಲಿ ಗುಹೆ ‘ ಯನ್ನು ಬೆಂಗಳೂರಿನ ಅಭಿನವ ಪ್ರಕಾಶನವು ಪ್ರಕಟಿಸಿದೆ.

ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಸ ಉಷಾ, ನಗರಗೆರೆ ರಮೇಶ್ ಹಾಗೂ ಎನ್ ಎಸ್ ಗುಂಡೂರ ಕೆಲಸ ನಿರ್ವಹಿಸಿದ್ದರೆ ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು , ಲೋಹಿತ್ ನಾಯ್ಕರ್ ಹಾಗೂ ಎಂ ಎಚ್ ನಾಗರಾಜ್ ಅವರು ಜ್ಯೂರಿಗಳಾಗಿದ್ದರು. ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆಯಿತು.

ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿ ವಿಜೇತರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.

ಡಾ ಸರಜೂ ಕಾಟ್ಕರ್
ಸಂಯೋಜಕರು
ಕೇಂದ್ರ ಸಾಹಿತ್ಯ ಅಕಾಡೆಮಿ
ಕನ್ನಡ ಭಾಷಾ ವಿಭಾಗ
ಹೊಸ ದೆಹಲಿ
ಮೊಬೈಲ್ ನಂಬರ್
9341029321

Sahitya Akademi awards for Dadapeer Jyman and Tammanna Beegar

New Delhi Aug 24: Hagaribommanahalli’s Dadapeer Jyman has bagged Central Sahitya Akademi’ s Youth literery award ( Yuva Sahitya puraskar) and Sisri – Siddapur’s Tammanna Beegar has got Central Sahitya Akademi ‘s award for children literature ( Bal Sahitya puraskar ) for 2022.

While Dadapeer’s Story collection ‘ Neel kurinji ‘ was adjudged as the best book for Yuva Sahitya Puraskar , Tammanna Beegar’s ‘ Bavali guhe ‘ a children’s novel was selected for the Bal sahitya puraskar.

Both the awards carries Rs 50000 and citation.The awards would be presented in a function to be organised at New Delhi in the month of December.

Sa Usha, Nagargere Ramesh and N S Gundur were the juries for the selection for Yava Sahitya puraskar, Lohit Naikar, Shivalingappa Handihal and M HNagaraj worked as the juries for Bal Sahitya puraskar. The selection of the awards were carried under the supervision of Dr Sarjoo Katkar , the convenor of Kannada advisory board of Sahitya Akademi, New Delhi.

Dr Chandrasekhar Kambar the President of Sahitya Akademi has congratulated the awardees.

Sarjoo Katkar
Convenor
Kannada advisory board
Sahitya Akademi
New Delhi.
Mobile – 9341029321

‍ಲೇಖಕರು Admin

August 24, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: