EXCLUSIVE: ಕೃಷ್ಣಮಠದ ಯತಿಗಳ ಮನಸ್ಸೊಳಗೆ ಮಸೀದಿ, ಹಂದಿಮಾಂಸ ತುಂಬಿರುವುದು ತರವಲ್ಲ..

ದೇವನೂರು ಇಂದು ಪದ್ಮಶ್ರೀ ಹಿಂದಿರುಗಿಸುವ ಸಮಯದಲ್ಲಿ ಹೇಳಿದ್ದು –

devanuru banavasi2ಹಾಗೇ ಸಮಾಜದ ಪಟ್ಟಭದ್ರರಾದ ಪೇಜಾವರಶ್ರೀ ಅಂಥವರು  ‘ಮಸೀದಿ ಮುಂದೆ ಹಂದಿ ಮಾಂಸ ಬೇಯಿಸಿದರೆ ಸುಮ್ಮನಾಗುತ್ತಾರ?’ ಎಂದು ಮೂದಲಿಸುವುದೂ ಕೂಡ ಅಂಥದೇ ಮನಸ್ಥಿತಿಯಾಗಿದೆ. ಕೃಷ್ಣಮಠದ ಯತಿಗಳ ಮನಸ್ಸೊಳಗೆ ಮಸೀದಿ, ಹಂದಿಮಾಂಸ ತುಂಬಿರುವುದು ತರವಲ್ಲ ಎಂದು ಹೇಳುವರು ಯಾರು? ಆಳ್ವಿಕೆ ನಡೆಸುತ್ತಿರುವವರಹಾಗೂ ಪಟ್ಟಭದ್ರರ ಇಂಥ ಧೋರಣೆಗಳು ಗೊತ್ತಿದ್ದೋ ಗೊತ್ತಿಲ್ಲದೆಯೋ ಸಮಾಜದಲ್ಲಿ ಅಸಹಿಷ್ಣುತೆ, ಹಿಂಸೆ ಹೆಚ್ಚಾಗಲು ಪ್ರಚೋದನೆ ನೀಡುತ್ತಿವೆ.

ಯಾಕೆಂದರೆ ಇಂದು ಅಸಹಿಷ್ಣುತೆಯ ಅಟ್ಟಹಾಸ ಎಸಗುತ್ತಿರುವ ಗುಂಪಿಗೆ ತಾನು ಗೆಲ್ಲಿಸಿದವರೇ ಕೇಂದ್ರ ಸಕರ್ಾರವಾಗಿರುವುದರಿಂದ ‘ತಾನು ಏನೇ ಮಾಡಿದರೂ ಮೇಲಿನವರ ಕೃಪೆಯಿಂದ ಬಚಾವಾಗಬಲ್ಲೆ’ ಎಂಬ ಭೀತಿಯಿಲ್ಲದ ಭಾವನೆ ಇರುವುದರಿಂದಲೇ ಈ ಹಿಂದೆ ಕದ್ದುಮುಚ್ಚಿ ನಡೆಯುತ್ತಿದ್ದ ಅಸಹನೆಯ ಹಿಂಸಾಕೃತ್ಯಗಳು ಇಂದು ಹಾಡಹಗಲೇ ಜರುಗುತ್ತಿವೆ. ಈ ಹಿಂದೆ ಎಂದೂ ಇಂಥ ಪರಿಸ್ಥಿತಿ ಉಂಟಾಗಿರಲಿಲ್ಲ. ಇದನ್ನು ಆತ್ಮಾವಲೋಕನ ಮಾಡಿಕೊಂಡರೆ ಮಾತ್ರ ಹಾಲಿ ಕೇಂದ್ರ ಸಕರ್ಾರವು, ತಾನೂ ಸಕರ್ಾರ ಕೊಡಬಲ್ಲುದು.

cartoon communalಈ ಸಂದರ್ಭದಲ್ಲಿ ಎಂದೋ ಎಲ್ಲೋ ಓದಿದ ಕತೆಯೊಂದು ನೆನಪಾಗುತ್ತಿದೆ : ಒಂದು ದರೋಡೆ, ಸುಲಿಗೆ ಹಿಂಸೆಯ ಸಮುದಾಯದ ಬಲಿಷ್ಠ ವ್ಯಕ್ತಿಯೊಬ್ಬನು ದುರ್ಬಲ ರಾಜನನ್ನು ಸೋಲಿಸಿ ತಾನೇ ರಾಜನಾದಾಗ ಆತ ಮಾಡುವ ಮೊದಲ ಕೆಲಸ – ತನ್ನ ಸಮುದಾಯದ ದರೋಡೆ ಹಿಂಸೆ ಅಪರಾಧಗಳಿಗೆ ಯಾವ ರಿಯಾಯಿತಿಯನ್ನು ಕೊಡದೆ ಹತ್ತಿಕ್ಕಿ ಅವರನ್ನು ಸುಸಂಸ್ಕೃತ ಸಭ್ಯ ಪ್ರಜೆಗಳನ್ನಾಗಿಸಿ ಸ್ವಾಸ್ಥ್ಯ ಸಮಾಜ ನಿಮರ್ಾಣಕ್ಕೆ ಕಾರಣನಾಗುತ್ತಾನಂತೆ -ಚರಿತ್ರೆಯು, ನಮ್ಮ ಹಾಲಿ ಪ್ರಧಾನಿಗಳ ಮುಂದೆ ಒಂದು ದೊಡ್ಡ ಸವಾಲನ್ನು ಇಟ್ಟು ಕಿರುನಗೆ ಬೀರುತ್ತಿರುವಂತಿದೆ.

ಒಟ್ಟಿನಲ್ಲಿ ಇದು ಎಲ್ಲರಿಗೂ ಆತ್ಮಾವಲೋಕನದ ಕಾಲ. ಜನರಲ್ ಮುಷರಫ್ರ ಕೊನೆಗಾಲದ ಆತ್ಮಾವಲೋಕದ ಮಾತುಗಳೂ ನಮಗೆ ಪಾಠವಾಗಬಲ್ಲುವು – ಸಯೀದ್, ಲಖ್ವಿ ಇವರುಗಳು ಕಾಶ್ಮೀರದ ವಿಮೋಚನಾ ಹೋರಾಟಗಾರರಾಗಿದ್ದಾಗ ಅವರು ನಮ್ಮ ಹೀರೋಗಳಾಗಿದ್ದರು. ಯಾವಾಗ ಅವರ ಹೋರಾಟಕ್ಕೆ ಧಾಮರ್ಿಕ ಉಗ್ರವಾದ ಅಂಟಿತೊ ಆಗ ಅದು ಭಯೋತ್ಪಾದನೆಯಾಗಿ ಮಾರ್ಪಟ್ಟಿತು. ಈಗ ಆ ಭಯೋತ್ಪಾದನೆ ತಮ್ಮ ಜನರನ್ನೇ ಅಂದರೆ ನಮ್ಮವರನ್ನೇ ಕೊಲ್ಲುವಲ್ಲಿಗೆ ಬಂದು ನಿಂತಿದೆ – ಇದನ್ನು ಚರಿತ್ರೆ ಕೂಗಿ ಕೂಗಿ ಹೇಳುತ್ತಾ ಬಂದಿದೆ. ಹಾಗೇ ‘ಧರ್ಮ ದೇವರ ಹೆಸರಲ್ಲಿ ಕೊಲೆ-ಸುಲಿಗೆ ದ್ವೇಷ ಮಾಡುವವರನ್ನು ದೇವರೂ ಕೂಡ ಕಾಪಾಡಲಾರ’ ಎಂಬ ಯೋಗಿಯ ಮಾತೂ ಇದೆ. – ಇದನ್ನು ಈ ಸಂದರ್ಭದಲ್ಲಿ ನೆನಪಿಸುವುದಕ್ಕಾಗಿ ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿದ್ದೇನೆ.

‍ಲೇಖಕರು admin

November 14, 2015

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: