ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಾಗರಾಜ ಕೋರಿಗೆ ‘ಡಾ ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ’


2022 ನೇ ಸಾಲಿನ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ/ನಿ ಕಥಾ ಪ್ರಶಸ್ತಿಯು ನಾಗರಾಜ ಕೋರಿ ಅವರ ‘ಕಳವಳದ ದೀಗಿ ಕುಣಿದಿತ್ತವ್ವ’ ಎಂಬ ಕಥೆಯ ಹಸ್ತಪ್ರತಿಗೆ ದೊರೆತಿದೆ. ಹಿರಿಯ ಬರಹಗಾರರಾದ ಎಂ.ಬಿ ಅಡ್ನೂರ ಮತ್ತು ಡಾ. ಚಿದಾನಂದ ಕಮ್ಮಾರ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು.

ಈ ಪುರಸ್ಕಾರವು ಐದು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ. ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ಹಾಗೂ ಶ್ರೀಮತಿ ವಿಜಯಾ ಅಗಸನಕಟ್ಟೆ ಸಹಯೋಗದಲ್ಲಿ ನಡೆವ ಸತತ ಐದನೇ ವರ್ಷದ ಸ್ಪರ್ಧೆಯಿದಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬರುವ ಜೂನ್ ತಿಂಗಳಲ್ಲಿ ನೆರವೇರಿಸಲಾಗುವುದು ಎಂದು ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


ಕಥೆಗಾರನ ಪರಿಚಯ:

ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ/ನಿ ಕಥಾ ಪ್ರಶಸ್ತಿ-2022, ಪಡೆದ ನಾಗರಾಜ ಕೋರಿ, ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿ, ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬನ್ನಿಗನೂರು ಎಂಬ ಗ್ರಾಮದವರು. ಬುದ್ದಗಿತ್ತಿಯ ನೆನಪು ಎಂಬ ಕವನ ಸಂಕಲನ ಮತ್ತು ತನುಬಿಂದಿಗೆ ಎಂಬ ಕಥಾ ಸಂಕಲನ ಈಗಾಗಲೇ ಪ್ರಕಟಗೊಂಡಿವೆ. ಕನ್ನಡ ಪುಸ್ತಕ ಪ್ರಾಧಿಕಾರ ಪ್ರಶಸ್ತಿ, ಮೋಹನ ಕುರಡಗಿ ಕಾವ್ಯ ಪ್ರಶಸ್ತಿ, ಮುಂಗಾರು ಕಥಾ ಬಹುಮಾನ ಮತ್ತು ಅಕ್ಷರ ಸಂಗಾತ ಕಥಾ ಬಹುಮಾನಗಳು ದೊರೆತಿವೆ. ಪ್ರಜಾವಾಣಿ, ಹೊಸತು, ಅಕ್ಷರ ಸಂಗಾತ ಪತ್ರಿಕೆಗಳಲ್ಲಿ ಇವರ ಕಥೆಗಳು ಪ್ರಕಟಗೊಂಡಿವೆ.

‍ಲೇಖಕರು Admin

24 May, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading