ವಿಜ್ಞಾನದಲ್ಲಿ ಜೀವಮಾನ ಸಾಧನೆಗೆ ನೀಡಲಾಗುವ ಪ್ರಶಸ್ತಿಗೆ ಖ್ಯಾತ ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆ ಹಾಗೂ ಸಿ ಆರ್ ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕೊಡಮಾಡುವ ಈ ಪ್ರಶಸ್ತಿ ವಿಜ್ಞಾನ ಸಂವಹನದಲ್ಲಿ ಜೀವಮಾನ ಸಾಧನೆ ಮಾಡಿದವರನ್ನು ಗುರುತಿಸುತ್ತದೆ.

ಪ್ರಶಸ್ತಿ ಒಂದು ಲಕ್ಷ ರೂ ನಗದು ಹಾಗೂ ಚಿನ್ನದ ಪದಕವನ್ನು ಒಳಗೊಂಡಿರುತ್ತದೆ.
ಮಾರ್ಚ್ 2ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ವಿತರಿಸಲಾಗುವುದು.





0 Comments