ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪತ್ರಿಕೋದ್ಯಮ ಫೆಲೋಶಿಪ್‌

ವಾರ್ತಾ ಇಲಾಖೆಯು 2012-13 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ವಾರ್ತಾ ಫೆಲೋಶಿಪ್‌ಗಾಗಿ ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಪಡೆದಿರುವವರಿಂದ ಅರ್ಜಿ ಆಹ್ವಾನಿಸಿದೆ. ಅಧ್ಯಯನದ ಅವಧಿ ಆರು ತಿಂಗಳಾಗಿದ್ದು, ಅಧ್ಯಯನಕ್ಕೆ ಅಗತ್ಯವಾದ ಆರ್ಥಿಕ ನೆರವನ್ನು ಇಲಾಖೆ ನೀಡುತ್ತದೆ. ಅಭ್ಯರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಪತ್ರಿಕೋದ್ಯಮ ವಿಷಯದಲ್ಲಿ ಪದವಿ, ಪಿಜಿ ಡಿಪ್ಲೊಮಾ ಮತ್ತು ಎಂ.ಎ.ಪದವಿಯಲ್ಲಿ ಕನಿಷ್ಠ ಶೇ 55 ರಷ್ಟು ಅಂಕಗಳನ್ನು ಪಡೆದಿರಬೇಕು. 21 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಸಮೂಹ ಮಾಧ್ಯಮ ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಬೇಕಾಗಿದ್ದು, ಅಭ್ಯರ್ಥಿಯು 5 ವಿವಿಧ ಶೀರ್ಷಿಕೆಯ ಪ್ರಾಸ್ತಾವಿಕ ಕಿರು ಟಿಪ್ಪಣಿಗಳನ್ನು ಸಲ್ಲಿಸಬೇಕು. ಆಯ್ಕೆ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ ಒಟ್ಟು 10 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಆಯಾ ಜಿಲ್ಲಾ ವಾರ್ತಾ ಇಲಾಖೆ ಕಚೇರಿ ಅಥವಾ ಕೇಂದ್ರ ಕಚೇರಿಗಳಿಂದ ಪಡೆಯಬಹುದು. ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರೊಳಗೆ ನಿರ್ದೇಶಕರು, ವಾರ್ತಾ ಇಲಾಖೆ, ನಂ.17, ಭಗವಾನ್ ಮಹಾವೀರ ರಸ್ತೆ ಇಲ್ಲಿಗೆ ಸಲ್ಲಿಸಬೇಕು. ದೂರವಾಣಿ-080-22028034.  ]]>

‍ಲೇಖಕರು G

5 July, 2012

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading