ಪಿ ಸತ್ಯವತಿಗೆ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ’

2021 ನೇ ಸಾಲಿನ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ’ವನ್ನು ಘೋಷಿಸಲಾಗಿದ್ದು ತೆಲುಗಿನ ಸುಪ್ರಸಿದ್ಧ ಕಥೆಗಾರ್ತಿ ಪಿ. ಸತ್ಯವತಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ಐದು ಲಕ್ಷ ರೂಪಾಯಿ ಮತ್ತು ಬೆಳ್ಳಿ ಪದಕಗಳನ್ನು ಒಳಗೊಂಡಿರುತ್ತದೆ.

ರಾಷ್ಟ್ರಕವಿ ಕುವೆಂಪುರವರ ಜನ್ಮೋತ್ಸವ ದಿನದಂದು (29-12-2021 ಬುಧವಾರ) ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕುಪ್ಪಳಿಯಲ್ಲಿ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ’ವನ್ನು ಪ್ರದಾನ ಮಾಡಲಾಗುವುದು.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಪ್ರೊ. ಹಂಪ. ನಾಗರಾಜಯ್ಯನವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿ‌ ಡಾ. ಕೆ. ಶ್ರೀನಿವಾಸ ರಾವ್, ಹಿರಿಯ ಸಾಹಿತಿ ಮತ್ತು ಅನುವಾದಕರಾದ ಪ್ರೊ. ಜಿ. ಅಶ್ವತ್ಥನಾರಾಯಣ ಮತ್ತು ನಾಟಕಕಾರ ಡಾ. ಕೆ.ವೈ. ನಾರಾಯಣಸ್ವಾಮಿಯವರು ಆಯ್ಕೆ ಸಮಿತಿಯ ಸದಸ್ಯರಾಗಿದ್ದರು. ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್‌ ಪ್ರಕಾಶ್‌ ಸಂಚಾಲಕರಾಗಿದ್ದರು.

ತೆಲುಗು ಸಾಹಿತ್ಯದ ಶ್ರೀಮಂತಿಕೆ ಹಾಗೂ ಸತ್ವವನ್ನು ತಮ್ಮ ಕಥೆ, ಕಾದಂಬರಿ, ಅನುವಾದಗಳನ್ನೊಳಗೊಂಡ ವಿಶಿಷ್ಟ ಕೃತಿಗಳ ಮೂಲಕ ಹೆಚ್ಚಿಸಿದ ಬಹು ಮಹತ್ವದ ಹಿರಿಯ ಲೇಖಕರಾ ಪಿ. ಸತ್ಯವತಿ ಅವರನ್ನು 2021ರ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ’ಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

‍ಲೇಖಕರು Admin

December 13, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: