ಪುಸ್ತಕ ಪ್ರಾಧಿಕಾರದ ಪ್ರಶಸ್ತಿ ಪ್ರಕಟ: ಕಾಪಸೆ, ಮೋಹನ್ ಆಳ್ವ, ನಾ ಸೋಮೇಶ್ವರಗೆ ಮನ್ನಣೆ…

ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನಗಳು ಪ್ರಕಟ

ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು. ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು. ವಿವರ ಕೆಳಕಂಡಂತಿದೆ.
2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತ ಪಟ್ಟಿ
ಅತ್ಯುತ್ತಮ ಪ್ರಕಾಶನ ಪ್ರಶಸ್ತಿ – ರೂ.1,00,000-00 – ರಾಷ್ಟ್ರೋತ್ಥಾನ ಸಾಹಿತ್ಯ, ಬೆಂಗಳೂರು

ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ – ರೂ.75,000-00 – ಡಾ. ಗುರುಲಿಂಗ ಕಾಪಸೆ, ಧಾರವಾಡ
ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ – ರೂ.50,000-00 – ಡಾ. ಮೋಹನ್ ಆಳ್ವ, ಮೂಡಬಿದರೆ
ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ – ರೂ.25,000-00 – ಡಾ. ನಾ. ಸೋಮೇಶ್ವರ, ಬೆಂಗಳೂರು

2021ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳ ವಿವರ

ಪುಸ್ತಕ ಸೊಗಸು ಮೊದಲನೇ ಬಹುಮಾನ – ರೂ.25,000-00
ನಮ್ಮ ದೇಹದ ವಿಜ್ಞಾನ
ಸಂ: ಡಾ. ಟಿ.ಆರ್. ಅನಂತರಾಮು
ಡಾ. ನಾ. ಸೋಮೇಶ್ವರ
ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್, ಬೆಂಗಳೂರು

ಪುಸ್ತಕ ಸೊಗಸು ಎರಡನೇ ಬಹುಮಾನ – ರೂ.20,000-00
ಅಜ್ಜಿ ಮನೆ ಸವಿ
ಸಂ: ಶ್ರೀಮತಿ ಉದ್ಯಾವರ ವಿಜಯಲಕ್ಷ್ಮಿ ಶೆಣೈ
ವಿಶೇಷ ಪಬ್ಲಿಕೇಷನ್ಸ್, ಬೆಂಗಳೂರು

ಪುಸ್ತಕ ಸೊಗಸು ಮೂರನೇ ಬಹುಮಾನ – ರೂ.10,000-00
ಮಹಾತ್ಮರ ಚರಿತಾಮೃತ
ಲೇ: ಪ್ರಭುಚನ್ನಬಸವ ಸ್ವಾಮೀಜಿ
ಶ್ರೀ ಗುರುಚನ್ನಬಸವೇಶ್ವರ ಗ್ರಂಥಮಾಲೆ, ಅಥಣಿ

ಮಕ್ಕಳ ಪುಸ್ತಕ ಸೊಗಸು ಬಹುಮಾನ – ರೂ.8,000-00
ನೋಟ್ಬುಕ್ – ಮಕ್ಕಳ ಕಥೆಗಳು
ಲೇ: ಡಾ. ಕೆ. ಶಿವಲಿಂಗಪ್ಪ ಹಂದಿಹಾಳು
ಕವನ ಪ್ರಕಾಶನ, ಬಳ್ಳಾರಿ

ಮುಖಪುಟ ಚಿತ್ರ ವಿನ್ಯಾಸ ಬಹುಮಾನ – ರೂ.10,000-00
ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ
ಲೇ: ಡಾ. ಮುಜಾಫರ್ ಅಸ್ಸಾದಿ
ಬಹುಮಾನಿತ ಕಲಾವಿದರು:
ಶ್ರೀ ಜಿ. ಅರುಣ ಕುಮಾರ್

ಮುಖಪುಟ ಚಿತ್ರ ಕಲೆಯ ಬಹುಮಾನ – ರೂ.8,000-00
ರೂಬಿಕ್ಸ್ ಕ್ಯೂಬ್ ಮತ್ತಿತರ ನಾಟಕಗಳು ಕ್ಲೀನ್ ಅಂಡ್ ಕ್ಲಿಯರ್ ಪಾಯಖಾನೆ ಮತ್ತು ಆಯಾಮ
ಲೇ: ಬೇಲೂರು ರಘುನಂದನ್
ಬಹುಮಾನಿತ ಕಲಾವಿದರು :
ಶ್ರೀ ಮಂಜುನಾಥ ವಿ.ಎಂ.

ಪುಸ್ತಕ ಮುದ್ರಣ ಸೊಗಸು ಬಹುಮಾನ – ರೂ.5,000-00
ಸಿರಿ ಬೆಳಕು
ಲೇ: ಶಿ.ರಾ. ಹೂಗಾರ
ಮುದ್ರಣಾಲಯ :
ತ್ವರಿತ ಮುದ್ರಣ ಆಫ್ಸೆಟ್ ಪ್ರಿಂಟರ್ಸ್, ಗದಗ

‍ಲೇಖಕರು Admin

June 4, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: