ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು!

ಪುರುಷೋತ್ತಮ ಬಿಳಿಮಲೆ

೨೦ನೇ ಶತಮಾನವಿಡೀ ಬದುಕಿ, ೨೧ನೇ ಶತಮಾನದ ಮೊದಲೆರಡು ದಶಕಗಳನ್ನೂ ಕಂಡು ನಮಗೆಲ್ಲರಿಗೂ ಸ್ಫೂರ್ತಿಯ ಕೇಂದ್ರವಾಗಿದ್ದ ಹಾರೋಹಳ್ಳಿಯ ಶ್ರೀನಿವಾಸಯ್ಯ ದೊರೆಸ್ವಾಮಿ ಅವರು ಇನ್ನಿಲ್ಲ ( ಜನನ: ಏಪ್ರಿಲ್ ೧೦, ೧೯೧೮, ಮರಣ : ಮೇ ೨೬, ೨೦೨೧) .

ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಸರಕಾರದ ಈಚಿನ ಭೂ ಕಬಳಿಕೆಯ ವಿರುದ್ಧದ ಹೋರಾಟದವರೆಗೂ ಅವರ ಚಟುವಟಿಕೆಗಳ ವ್ಯಾಪ್ತಿ ಹಬ್ಬಿತ್ತು. ಪತ್ರಕರ್ತರಾಗಿಯೂ ಅವರು ಪ್ರಸಿದ್ಧರು.

ಗಾಂಧೀ ಹತ್ಯೆಯ ಕೆಲವು ದಿನಗಳ ಮೊದಲು ಗೋಡ್ಸೆ ಬೆಂಗಳೂರಿಗೆ ಬಂದದ್ದನ್ನು ಅವರು ದಾಖಲಿಸಿದ್ದರು. ಕರ್ನಾಟಕ ಏಕೀಕರಣಕ್ಕೂ ಅವರು ದುಡಿದಿದ್ದರು. ಇಂದಿರಾಗಾಂಧೀ ಕಾಲದಲ್ಲಿ ತುರ್ತುಪರಿಸ್ಥಿತಿ ವಿರೋಧಿಸಿ ಜೈಲುವಾಸ ಅನುಭವಿಸಿದ್ದ ಅವರು, ಈಚೆಗೆ ವೇಗವಾಗಿ ಬೆಳೆಯುತ್ತಿರುವ ಫ್ಯಾಸಿಸಂನ ವಿರುದ್ಧವೂ ಧ್ವನಿ ಎತ್ತುತ್ತಿದ್ದರು.

ʼಗಾಂಧೀ ಮತ್ತು ಅಂಬೇಡ್ಕರ್ ಅವರುಗಳಲ್ಲಿ ಭಿನ್ನಾಭಿಪ್ರಾಯ ಇತ್ತೇ ಹೊರತು ವೈರತ್ವ ಇರಲಿಲ್ಲʼ ಎಂಬ ಅವರ ಮಾತು ನನಗೆ ವೈಯಕ್ತಿಕವಾಗಿ ಬಹಳ ಖುಷಿ ನೀಡಿತ್ತು.

ಒಳ್ಳೆಯವರನ್ನೆಲ್ಲಾ ಟ್ರೋಲ್‌ ಮಾಡುವುದನ್ನೇ ಕೆಲಸ ಮಾಡಿಕೊಂಡಿರುವವರ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿತ್ತು. ‘ನಿಮ್ಮ ಬಗ್ಗೆ ಹೀಗೆ ಬರೆದಿದ್ದಾರಲ್ಲಾ?’ ಎಂದರೆ ಅಜ್ಜ ನಕ್ಕುಬಿಡುತ್ತಿದ್ದರು!

ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು!

ನಮನಗಳು ಸಾರ್‌.

‍ಲೇಖಕರು Avadhi

26 May, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading