ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಗೌರಮ್ಮ ಮೋತಿ ಪಿ. ರಾಮರಾವ್ ಚಾರಿಟಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನೀಡಲಾಗುವ ‘ಮಹಲಿಂಗರಂಗ ಪ್ರಶಸ್ತಿ’ಯನ್ನು ಸಾಹಿತಿ, ವರದಿಗಾರರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್ ಅವರಿಗೆ ನೀಡಲಾಗುತ್ತಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 7ರಂದು ಸಂಜೆ 4ಕ್ಕೆ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ.
ಎಸ್ ಪಿ ಹನುಮಂತರಾಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಉದ್ಯಮಿ ಮೋತಿ ಆರ್. ಪರಮೇಶ್ವರ ರಾವ್, ಕಸಪ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಎ.ಆರ್. ಉಜ್ಜನಪ್ಪ, ದಾವಣಗೆರೆ ತಾಲ್ಲೂಕು ಕಸಪ ಅಧ್ಯಕ್ಷ ಬಿ. ವಾಮದೇವಪ್ಪ ಭಾಗವಹಿಸಲಿದ್ದಾರೆ.
ಬಿ ಎನ್ ಮಲ್ಲೇಶ್ ಅವರಿಗೆ 'ಮಹಲಿಂಗರಂಗ' ಪ್ರಶಸ್ತಿ
ನಿಮಗೆ ಇವೂ ಇಷ್ಟವಾಗಬಹುದು…





Congratulations Sir