ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬೀಚಿ ಬಯಾಗ್ರಫಿ ಪುಟದಿಂದ

“ನಂಗಿನ್ನೊಂದು ಕನ್ಯಾ ನೋಡ್ರಪ್ಪಾ !”

– ಡಾ ಡಿ ಟಿ ಕೃಷ್ಣಮೂರ್ತಿ

ಕೊಳಲು

ನಮ್ಮ ಹಿರಿಯರ ಹಾಸ್ಯ ಪ್ರಜ್ಞೆ ಅದ್ಭುತವಾಗಿತ್ತು!!!ಇದು ನಾನು ಹೇಳಿದ್ದಲ್ಲ. ಬೀಚಿ ಯವರು ತಮ್ಮ ಆತ್ಮ ಕಥನ “ಭಯಾಗ್ರಫಿ”ಯಲ್ಲಿ ಅದರ ಬಗ್ಗೆಯೇ ಒಂದು ಅಧ್ಯಾಯ ವನ್ನು ಬರೆದಿದ್ದಾರೆ.

ರೇಖಾಚಿತ್ರ : ಸದಾಶಿವನ್

ಹರಪನಹಳ್ಳಿಯಲ್ಲಿದ್ದ ಶೇಷ ಮುತ್ಯ ಮತ್ತು ಕಮಲ ಕಕ್ಕಿ ತೊಂಬತ್ತರ ಸನಿಹದ ವೃದ್ಧ ದಂಪತಿಗಳು.ಆ ವಯಸ್ಸಿನಲ್ಲೂ ಅವರದು ಬತ್ತದ ಉತ್ಸಾಹ ಮತ್ತು ಅದ್ಭುತ ಹಾಸ್ಯ ಪ್ರಜ್ಞೆ!!!  ಒಂದು ರಾತ್ರಿ ಶೇಷ ಮುತ್ಯ ಮನೆಯಿಂದ ಹೊರಬಿದ್ದರು.ಒಂದು ಕೈಯಲ್ಲಿ ಬಡಿಗೆ ,ಇನ್ನೊಂದು ಕೈಯಲ್ಲಿ ಕಮಲ ಕಕ್ಕಿಯ ಕೈ.ಕಮಲ ಕಕ್ಕಿಯ ಇನ್ನೊಂದು ಕೈಯಲ್ಲಿ ಕೈ ದೀಪ.ಕಮಲ ಕಕ್ಕಿ ಗಟ್ಟಿ ದನಿಯಲ್ಲಿ ಪೇಚಾಡಿಕೊಂಡರು.”ಕಣ್ಣಿಲ್ಲ,ಕಾಲಿಲ್ಲ.ಕುಂತಲ್ಲಿ ಕೂಡೋಲ್ಲಾ ,ನಿಂತಲ್ಲಿ ನಿಲ್ಲೋಲ್ಲಾ!ಮುದಕರಾದ ಮ್ಯಾಲೆ ಮನೆಯಾಗೆ ಸುಮ್ಮನೆ ಕೂಡ ಬಾರದೇನು?” ಇದಕ್ಕೆ ಶೇಷ ಮುತ್ಯನ ಉತ್ತರ “ಏ….,ಏನೇ !! ನೀನೇ ನನ್ನ ಮುದುಕ ಅಂದು ಬಿಟ್ಟರೆ ಮಂದಿ ಅನ್ನದೆ ಬಿಟ್ಟಾರೇ…?”ಅಲ್ಲಿದ್ದವರೆಲ್ಲಾ ಜೋರಾಗಿ ನಕ್ಕರು.ಕಮಲ ಕಕ್ಕಿಯೂ “ಮಾತಿಗೇನೂ ಕಮ್ಮಿ ಇಲ್ಲ “ಎಂದು ನಕ್ಕು ಸುಮ್ಮನಾದರು.

ಶೇಷ ಮುತ್ಯ ಮತ್ತು ಕಮಲ ಕಕ್ಕಿ ಇಬ್ಬರೂ ಒಂದೇ ಬಾರಿಗೆ ಹಾಸಿಗೆ ಹಿಡಿದರು.ಸಾವು ಸಮೀಪಿಸಿದೆ ಅನ್ನಿಸಿತು ಮಕ್ಕಳಿಗೆ.ಎಲ್ಲಾ ಬಂಧುಗಳನ್ನೂ ಕರೆಸಿದರು.ಕಮಲ ಕಕ್ಕಿ ಮೊದಲು ಸತ್ತರು.ಶೇಷ ಮುತ್ಯ ಅರೆ ಬರೆ ಪ್ರಜ್ಞಾವಸ್ಥೆಯಲ್ಲಿದ್ದರು. ಅವರಿಗೆ ಕಮಲ ಕಕ್ಕಿಯ ಸಾವಿನ ಸುದ್ಧಿ ಹೇಳಿದರೆ ಹೃದಯಾ ಘಾತ ವಾಗಬಹುದು ಎಂದು ಹೆದರುತ್ತಲೇ ಅವರ ಬಳಿ ಸಮೀಪಿಸಿ”ಶೇಷ ಮುತ್ಯಾ,ಶೇಷ ಮುತ್ಯಾ ….”ಎಂದು ಕೂಗಿದರು.ಸಾವಿನತ್ತ ಸಾಗುತ್ತಿದ್ದ ಶೇಷ ಮುತ್ಯಾ ಕಣ್ಣು ತೆರೆದರು.ಏನು ಎಂಬಂತೆ ನೋಡಿದರು.”ಕಮಲ ಕಕ್ಕಿ ಹೋದಳು” ಎಂದರು. “ಹೋದಳೇ..?” …..ಮೌನ.ಸಣ್ಣದೊಂದು ಕಿರು ನಗೆಯೊಂದಿಗೆ ಕ್ಷೀಣ ದನಿಯಲ್ಲಿ “ನಂಗಿನ್ನೊಂದು ಕನ್ಯಾ ನೋಡ್ರಪಾ”ಎಂದರು.ಸಾಯುವ ಸಮಯದಲ್ಲೂ ಹಾಸ್ಯವೇ?!!! ಎಂತಹ ಅದ್ಭುತ,ಅಪರೂಪದ ಚೇತನ ಇವರದು!! ಸಾವಿನ ಮನೆಯಲ್ಲಿ ನಗೆಯೇ ನಗೆ.ಕೆಲ ಗಂಟೆಗಳ ನಂತರ ಶೇಷ ಮುತ್ಯ ಕೂಡ ದೇಹವನ್ನು ತ್ಯಜಿಸಿದರು.ನಗು ನಗುತ್ತಲೇ ಇಹಲೋಕ ಯಾತ್ರೆ ಮುಗಿಸಿ ಎಲ್ಲರ ಮನಸ್ಸಿನಲ್ಲೂ ತಂಬೆಳಕಿನಂತೆ ಉಳಿದು ಹೋದರು!!!

]]>

‍ಲೇಖಕರು G

24 August, 2012

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading