ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬೆಳಕಿನ ಬೆನ್ನತ್ತಿಹೋದ ಜಿ ಕೆ ಗೋವಿಂದರಾವ್…

ರಂಗಭೂಮಿ, ಸಿನಿಮಾ, ಸಾಂಸ್ಕೃತಿಕ ಮತ್ತು ಚಳುವಳಿ ಕ್ಷೇತ್ರದ ಹಿರಿಯ ಚೇತನ ಜಿ.ಕೆ.ಗೋವಿಂದ ರಾವ್ ಅವರು ಇನ್ನಿಲ್ಲ.

ಇಂದು ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಗೋವಿಂದ ರಾವ್ ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ. ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿತ್ತು.

ಈಶ್ವರ ಅಲ್ಲಾ (ಕಿರು ಕಾದಂಬರಿ), ಶೇಕ್ಸ್‌ಪಿಯರ್‌ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ಪಿಯರ್‌ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು) ಸೇರಿ ಅನೇಕ ಮಹತ್ವದ ಕೃತಿಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ.

ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು.

‍ಲೇಖಕರು Admin

15 October, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading