ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬೇಲಿ ಮತ್ತು ಹೊಲ….

ಕರ್ನಾಟಕ-ಆಂಧ್ರದ ಗಡಿಭಾಗದಲ್ಲಿ ನಡೆದ ಒಂದು ಘಟನೆಯನ್ನು ಆಧರಿಸಿ, ನಮ್ಮ ನಡುವಿನ ಅನನ್ಯ ಕಥೆಗಾರ ಕುಂ. ವೀರಭದ್ರಪ್ಪ ಅವರು ಬರೆದ ಕಿರುಕಾದಂಬರಿ ಬೇಲಿ ಮತ್ತು ಹೊಲ. ಇದರ ಹೆಸರೇ ಸೂಚಿಸುವಂತೆ “ಬೇಲಿ” ಆಳುವ ವ್ಯವಸ್ಥೆಯನ್ನು ಮತ್ತು “ಹೊಲ” ಸಾಮಾನ್ಯ ಪ್ರಜೆಯನ್ನು ಪ್ರತಿನಿಧಿಸುತ್ತದೆ. ಕಾನೂನಿನಡಿ ನುಸುಳುವ ಹಾಗೂ ಭ್ರಷ್ಟತೆಯನ್ನು ನಿಭಾಯಿಸುವ ಕಲೆ ಕರಗತ ಮಾಡಿಕೊಂಡವನು ಹೇಗೆ ಆಳುವ ಪ್ರಕ್ರಿಯೆಯಲ್ಲಿ ಅಂತರ್ಗತನಾಗುತ್ತಾನೆ ಎಂಬುದು ಗಂಭೀರ ವಾಸ್ತವ. ಕಾನೂನು ಹಾಗೂ ವ್ಯವಸ್ಥೆಯ ಪ್ರತಿನಿಧಿಯಾಗಿ ಪೊಲೀಸ್ ಅಧಿಕಾರಿ ಪ…ೋತುರಾಜು, ದಲ್ಲಾಳಿ ವ್ಯವಸ್ಥಯ ಹರಿಕಾರನಾಗಿ ವಿಠ್ಠೋಬ, ಮಾಧ್ಯಮ ಪ್ರವರ್ತಕನಾಗಿ ಪತ್ರಕರ್ತ ಕಹಳೆ ಪಾಟೀಲ್, ಇಂದಿನ ರಾಜಕೀಯ ವ್ಯವಸ್ಥೆಯ ಪ್ರತಿನಿಧಿಯಾಗಿ ಭೀಮಣ್ಣ, ಸಾಮಾನ್ಯ ಪ್ರಜೆಯ ಪ್ರತಿನಿಧಿಯಾಗಿ ಚಂಬಸ್ವ, ಪಾರವ್ವ, ಬಡಕೊಟ್ರಯ್ಯ ಹಾಗೂ ಹಳ್ಳಿಗರು ಪ್ರತಿನಿಧಿಸುತ್ತಾರೆ. ಇಡೀ ಕಥಾವಸ್ತುವಿನ ಅಂತರಾಳ ಪ್ರಜಾಸಮೂಹ ಅಥವಾ ಒಬ್ಬ ಸಾಮಾನ್ಯನಿಗೆ ಅನ್ಯಾಯ, ಶೋಷಣೆ, ಹಿಂಸೆಗೆ ಗುರಿಯಾದಾಗ ಪ್ರಸ್ತುತ ಸುದ್ದಿಮಾಧ್ಯಮಗಳು ಅದನ್ನು ತಿದ್ದುವ ಕಾಯಕದಲ್ಲಿ ಮಾಡುವ ಸದ್ದಾಗಲೀ, ಪ್ರಬುದ್ಧರು ನಡೆಸುವ ಪ್ರತಿಭಟನೆ, ಮುಷ್ಕರ, ಚಳುವಳಿಗಳಾಗಲೀ ಬರಬರುತ್ತಾ ತೀರಾ ಮಾಮೂಲಿಯೂ, ಯಾಂತ್ರಿಕವೂ ಆಗಿ ನಮ್ಮನ್ನಾಳುವ ಪ್ರಭುಗಳನ್ನು ತಿದ್ದುವ, ಶಿಕ್ಷಿಸುವ ಪರಿಣಾಮದ ತೀವ್ರತೆ ಕಳೆದುಕೊಳ್ಳುತ್ತಿವೆ ಎನ್ನುವುದು ನಮ್ಮ ಮುಂದಿರುವ ದುರಂತ.. ಪೂರ್ಣ ಓದಿಗೆ – ಸೈಡ್ ವಿಂಗ್]]>

‍ಲೇಖಕರು G

5 January, 2011

ನಿಮಗೆ ಇವೂ ಇಷ್ಟವಾಗಬಹುದು…

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading