ಬ್ರೇಕಿಂಗ್ ನ್ಯೂಸ್ : ಕಾಸರವಳ್ಳಿ ಮತ್ತು ಪಿ ಶೇಷಾದ್ರಿಗೆ ರಾಷ್ಟ್ರೀಯ ಪ್ರಶಸ್ತಿ

61ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ

ಗಿರೀಶ್ ಕಾಸರವಳ್ಳಿ ಹಾಗು ಪಿ ಶೇಷಾದ್ರಿ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ.

ಅತ್ಯುತ್ತಮ ಸಾಕ್ಷ್ಯಚಿತ್ರಕ್ಕಾಗಿ ಗಿರೀಶ್ ಕಾಸರವಳ್ಳಿ ಅವರಿಗೆ ಪ್ರಶಸ್ತಿ ಲಭಿಸಿದೆ. (ಯು.ಆರ್ ಅನಂತಮೂರ್ತಿ ಕುರಿತ ಸಾಕ್ಷ್ಯಚಿತ್ರ)

ಪಿ. ಶೇಷಾದ್ರಿ ನಿರ್ದೇಶನದ ‘ಡಿಸೆಂಬರ್ 1’ ಚಿತ್ರಕ್ಕೆ ಅತ್ಯುತ್ತಮ ಚಿತ್ರಕತೆ ಹಾಗೂ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ

’ಡಿಸೆಂಬರ್ 1′ ಚಿತ್ರದ ಸ್ಥೂಲ ಕಥೆ ಇಲ್ಲಿದೆ :
ಅದೊಂದು ಉತ್ತರಕರ್ನಾಟಕದ ಒಂದು ಪುಟ್ಟ ಹಳ್ಳಿ. ಅಲ್ಲಿ ರೊಟ್ಟಿ ಮಾರಿ ಜೀವನ ಸಾಗಿಸುತ್ತಿರುವ ದೇವಕ್ಕನದ್ದು ಒಂದು ಪುಟ್ಟ ಕುಟುಂಬ. ಗಂಡ ಮಾದೇವಪ್ಪ ಟ್ರಕ್ ಓಡಿಸುತ್ತಾ ಸೀಮೆ ಸುತ್ತುತ್ತಿದ್ದವನು, ಅಪಘಾತದಲ್ಲಿ ಕಾಲು ಊನ ಮಾಡಿಕೊಂಡು ಈಗ ಹಿಟ್ಟಿನ ಗಿರಣಿಯಲ್ಲಿ ಚಿಕ್ಕಾಸಿಗೆ ದುಡಿಯುತ್ತಿದ್ದಾನೆ. ಗ್ರಾಮವಾಸ್ತವ್ಯದ ಹಿನ್ನೆಲೆಯಲ್ಲಿ ಡಿಸೆಂಬರ್ ಒಂದರಂದು ರಾಜ್ಯದ ಮುಖ್ಯಮಂತ್ರಿಗಳು ಆ ಮನೆಯಲ್ಲಿ ತಂಗುವ ನಿರ್ಧಾರ ಮಾಡುತ್ತಾರೆ. ದಿಢೀರನೆ ಮಾದೇವಪ್ಪ ದಂಪತಿಗಳಿಗೆ ಎಲ್ಲಿಲ್ಲದ ಪ್ರಾಮುಖ್ಯತೆ ಬರುತ್ತದೆ. ದೇವಕ್ಕನ ರೊಟ್ಟಿಗೆ ಡಿಮ್ಯಾಂಡ್ ಸೃಷ್ಟಿಯಾಗುತ್ತದೆ. ಮುಖ್ಯಮಂತ್ರಿಗಳ ಹೆಸರಿನಲ್ಲಿ ಕರೆಂಟು, ಟೀವಿ, ಫ್ರಿಜ್ಜು, ಸೋಫಾ ಬಂದು ಕೂರುತ್ತವೆ. ಆದರೆ ಸಿ‌ಎಂ ಉಳಿಯಲು ದೇವಕ್ಕನ ಮನೆಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಬಡತನವನ್ನು ಮೀರಿದ ಕಾರಣಗಳಿರುತ್ತವೆ. ಯಾವಾಗಲೂ ಬ್ರೇಕಿಂಗ್ ನ್ಯೂಸ್‍ಗೆ ಹಸಿದಿರುವ ಮಾಧ್ಯಮದ ಪ್ರತಿನಿಧಿಯೊಬ್ಬ ಆ ಕಾರಣವನ್ನು ಪತ್ತೆ ಮಾಡುತ್ತಾನೆ. ಸಿ‌ಎಂ ಬಂದು ಹೋದಮೇಲೆ ಅದು ಮಾಧ್ಯಮಗಳಲ್ಲಿ ರಟ್ಟಾದಾಗ ಇಡೀ ಹಳ್ಳಿ ಬೆಚ್ಚಿಬೀಳುತ್ತದೆ. ಈ ಕುಟುಂಬದ ಬದುಕು ಛಿದ್ರವಾಗುತ್ತದೆ!

***

ಪ್ರಶಸ್ತಿ ವಿಜೇತರಿಗೆ ಅವಧಿಯ ಅಭಿನಂದನೆಗಳು
 

‍ಲೇಖಕರು G

April 16, 2014

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

6 ಪ್ರತಿಕ್ರಿಯೆಗಳು

  1. kumvee

    ಓಹ್! ನಮ್ಮ ಪದ್ಮಶ್ರಿ ಗಿರೀಶ ಕಾಸರವಳ್ಳಿ ಮತ್ತು ಮಿತ್ರ ಪಿ.ಶೇಷಾದ್ರಿ ತಮ್ಮ ಚಿತ್ರಗಳಿಗೆ ರಾಷ್ತ್ರೀಯ ಪ್ರಶಸ್ತಿ ಪಡೆಯುವುದರ ಮೂಲಕ ತಮ್ಮ ಅಭಿಜಾತ ಪ್ರತಿಭೆಯನ್ನು ರಾಷ್ತ್ರೀಯ ಮಟ್ಟದಲ್ಲಿ ಸಾಬೀತು ಪಡಿಸಿದ್ದಾರೆ,
    ಕನ್ನಡ ಚಿತ್ರರಂಗದ ಗೌರವದ ಸುರಕ್ಷತೆಯನ್ನು ಕಾಪಾಡಿದ್ದಾರೆ. ಅವರೀರ್ವರಿಗೆ ನಮ್ಮೆಲ್ಲರ ಹಾರ್ದಿಕ ಅಭಿನಂದನೆಗಳು
    ಕುಂವೀ/ಪುರೂರವ/ಶಾಲಿವಾಹನ/ಪ್ರವರ

    ಪ್ರತಿಕ್ರಿಯೆ
  2. Naren

    It is indeed a very happy time for Kannada film field and culture!.
    Congratulations for both, let us shine in the world cinema arena.
    Narendra

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: