ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಇಂದು ಇಲ್ಲಿ ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ.

ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರುಪಾಯಿ ಹಾಗೂ ಸನ್ಮಾನ ಒಳಗೊಂಡಿದ್ದರೆ ಅನುವಾದ ಪ್ರಶಸ್ತಿ ಐವತ್ತು ಸಾವಿರ ರುಪಾಯಿ ಹಾಗೂ ಸನ್ಮಾನಗಳು ಒಳಗೊಂಡಿರುತ್ತವೆ.

‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನವು ಪ್ರಕಟಿಸಿದೆ. ಪದ್ಮರಾಜ ದಂಡಾವತಿ ಅವರು ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ ಮನೋಹರ ಗ್ರಂಥಮಾಲೆಯು ಈ ಕೃತಿಯನ್ನು ಪ್ರಕಟಿಸಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ.ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ಈ ಪ್ರಶಸ್ತಿ ಆಯ್ಕೆಯು ನಡೆಯಿತು.

ಅನುವಾದ ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಜಗದೀಶ್ ಕೊಪ್ಪ, ಕಮಲಾಕರ ಭಟ್ಟ ಹಾಗೂ ಮೋಹನ್ ಕುಂಟಾರ ಕೆಲಸ ನಿರ್ವಹಿಸಿದ್ದರೆ ಮುಖ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಡಾ. ಸಿ. ನಾಗಣ್ಣ, ಪದ್ಮರಾಜ ದಂಡಾವತಿ ಹಾಗೂ ಚಂದ್ರಶೇಖರ ವಸ್ತ್ರದ ಅವರು ಜ್ಯೂರಿಗಳಾಗಿದ್ದರು.

ಪ್ರಶಸ್ತಿಗಳನ್ನು ೨೦೨೩ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ವಿಜೇತರರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.\

‍ಲೇಖಕರು Admin

December 22, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: