ರಂಗಕರ್ಮಿ ಪ್ರಸನ್ನ ಅವರಿಗೆ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ 

2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿಗೆ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಈ ವಿಷಯವನ್ನು ಪ್ರಕಟಿಸಿದರು. ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

‘ಸಂಯುಕ್ತ ಕರ್ನಾಟಕ’ ಪತ್ರಿಕೆಯ ಸಂಪಾದಕ ಹುಣಸವಾಡಿ ರಾಜನ್, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ ಕೃಷ್ಣ ಈ ಸಮಿತಿಯ ಸದಸ್ಯರಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್ ಆರ್ ವಿಶುಕುಮಾರ್ ಸದಸ್ಯ ಕಾರ್ಯದರ್ಶಿಗಳಾಗಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೀಡಲಾಗುವ ಈ ಪ್ರಶಸ್ತಿ 5 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದ್ದು, ಗಾಂಧಿ ಜಯಂತಿಯ ದಿನದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈವರೆಗೆ ಈ ಪ್ರಶಸ್ತಿಗೆ ಹಿರಿಯ ಗಾಂಧಿವಾದಿಗಳಾದ ಎಸ್.ಎನ್. ಸುಬ್ಬರಾವ್, ಹೊ. ಶ್ರೀನಿವಾಸಯ್ಯ, ಚನ್ನಮ್ಮ ಹಳ್ಳಿಕೇರಿ ಹಾಗೂ ಹೆಚ್.ಎಸ್. ದೊರೆಸ್ವಾಮಿ ಅವರು ಆಯ್ಕೆಯಾಗಿದ್ದರು.

‍ಲೇಖಕರು avadhi

September 25, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

2 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: