ಬಹುಮಾನಗಳ ವಿವರ:
ಮೊದಲ ಬಹುಮಾನ: ರೂ. 6000
ಎರಡನೆ ಬಹುಮಾನ: ರೂ. 4000
ಮೂರನೆಯ ಬಹುಮಾನ: ರೂ. 3000
ಎರಡು ಪ್ರೋತ್ಸಾಹಕ ಬಹುಮಾನಗಳು: ತಲಾ ರೂ. 1000
ನಿಮ್ಮ ಕತೆ ತಲುಪಲು ಕೊನೆಯ ದಿನಾಂಕ: ಆಗಸ್ಟ್ 31, 2012 ಸೆಪ್ಟೆಂಬರ್ ತಿಂಗಳಿನಲ್ಲಿ ಕತೆಗಳ ಮೌಲ್ಯಮಾಪನ ಮಾಡಿ ಗಾಂಧಿ ಜಯಂತಿಯ ಸಂದರ್ಭದಲ್ಲಿ ಒಂದು ಪುಟ್ಟ ಸಭೆ ಮಾಡಿ ಬಹುಮಾನ ನೀಡಲಾಗುತ್ತದೆ. ಬಹುಮಾನ ಪಡೆದ ಕತೆಗಳು ನಂತರ ವರ್ತಮಾನ.ಕಾಮ್ನಲ್ಲಿ ಪ್ರಕಟವಾಗಲಿವೆ. ಮಾಮೂಲಿನಂತೆ ಎಲ್ಲಾ ಕಥಾಸ್ಪರ್ಧೆಗಳ ನಿಬಂಧನೆಗಳು ಇಲ್ಲಿಯೂ ಅನ್ವಯಿಸುತ್ತವೆ: ಕತೆ ಸ್ವಂತದ್ದಾಗಿರಬೇಕು; ಅಪ್ರಕಟಿತವಾಗಿರಬೇಕು; ಕನಿಷ್ಟ 1500 ಪದಗಳದ್ದಾಗಿರಬೇಕು. ಮತ್ತು, ಕೆಲವು ತಾಂತ್ರಿಕ ಮತ್ತು ಅನುಕೂಲದ ಕಾರಣಕ್ಕಾಗಿ ದಯವಿಟ್ಟು ನಿಮ್ಮ ಕತೆಯ ಸಾಫ್ಟ್ ಕಾಪಿಯನ್ನೇ ಕಳುಹಿಸಿ. ಬರಹ/ನುಡಿ/ಯೂನಿಕೋಡ್, ಹೀಗೆ ಯಾವುದೇ ತಂತ್ರಾಂಶದಲ್ಲಿದ್ದರೂ ಸರಿ.ಕತೆಗಳನ್ನು ಕಳುಹಿಸಬೇಕಾಗದ ಇಮೇಲ್ ವಿಳಾಸ: editor@vartamaana.com
]]>




its a good move to track new talent . please keep it up……….