ವಾಟಾಳ್ ನಾಗರಾಜರ ಹೊಸ ಸಾಹಸದ ಬಗ್ಗೆ ಯಾರಾದರೂ ಬರೆದಿರಬಹುದೇ ಎಂದು ಗೊತ್ತಿರುವ ಬ್ಲಾಗ್ ಗಳನ್ನೆಲ್ಲಾ ಜಾಲಾಡಿದೆ. ಕಾಣಿಸಲಿಲ್ಲ. ’ಬೊಗಳೆ-ರಗಳೆ’ಯಲ್ಲಾದರೂ ಕಾಣಿಸಿಕೊಳ್ಳಬಹುದೆಂದು ಭಾವಿಸಿದ್ದೆ. ಅಲ್ಲೂ ಇರಲಿಲ್ಲ. ಹಾಗಾಗಿ ಈ ಕಾಯಕಕ್ಕೆ ಕೈ ಹಾಕುತ್ತಿದ್ದೇನೆ.
ವಿಷಯ ಏನಪ್ಪಾ ಅಂದ್ರೆ, ನಿನ್ನೆ ಇದ್ದಕ್ಕಿದ್ದಂತೆ ನಮ್ಮ ಕನ್ನಡದ ಉಟ್ಟು ಓರಾಟಗಾರ, ಪ್ರತಿಭಟನೆಗಳ ಸರದಾರ ವಾಟಾಳ್ ನಾಗರಾಜ್ ಪತ್ರಿಕಾ ಗೋಷ್ಟಿ ಕರೆದಿದ್ದರು. ಅಲ್ಲಿ ಅವರು ಹೇಳಿದ್ದು; ಸರಕಾರವು ರಾಜ್ಯಾದ್ಯಂತ ಸರ್ವಾಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಡಿಸೆ.ಬರ ಅಂತ್ಯದೊಳಗಾಗಿ ಸರಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಇಲ್ಲವಾದರೆ ತಾವು ರಾಜಭವನದ ಎದುರು ’ಉಚ್ಚೆ ಹೊಯ್ಯುವ ಚಳುವಳಿ’ ನಡೆಸುವುದಾಗಿ ಹೇಳಿದರು. ಮುಂದೆ ಈ ಚಳುವಳಿಯನ್ನು ಹಂತ ಹಂತವಾಗಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಲೋಕಸಭಾ ಸದಸ್ಯರು ಹಾಗು ಐಎ ಎಸ್ ಅಧಿಕಾರಿಗಳ ನಿವಸಕ್ಕೂ ವಿಸ್ತರಿಸುವುದಾಗಿಯೂ ಸ್ಪಷ್ಟಪಡಿಸಿದರು
ಸಂಪೂರ್ಣ ಓದಿಗೆ ಭೇಟಿ ಕೊಡಿ- ಮೌನ ಕಣಿವೆ
+++
ಪತ್ರಕರ್ತನ ಪತ್ರಕತೆ
ಸುರೇಶ್ ಕೆ `ಉದಯವಾಣಿ’ಯ ಸಹೋದ್ಯೋಗಿ. ಶುಕ್ರವಾರದ `ಸುಚಿತ್ರ’ ಸಿನಿಪುರವಣಿಯನ್ನು ನಿರ್ವಹಿಸುವವರು. ಅಂದವಾದ ಮುಖಪುಟ ರೂಪಿಸುವಲ್ಲಿ, ವಿಶೇಷವಾಗಿ ಪುರವಣಿಗಳಿಗೆ ಅಂದ, ಆಕಾರವನ್ನು ನೀಡುವಲ್ಲಿ ನುರಿತಿರುವ ಲೇಔಟ್ ತಜ್ಞ. ಸಿನಿಮಾಗಳನ್ನು ಖಚಿತವಾಗಿ ವಿಮರ್ಶಿಸಬಲ್ಲ, ಮೊನಚಾಗಿ ಬರೆಯಬಲ್ಲ, ಯಾವುದೇ ಕಲೆಯನ್ನು ಸುಲಭವಾಗಿ ಗ್ರಹಿಸಿ, ಬರವಣಿಗೆಗೆ ಇಳಿಸಬಲ್ಲವರು ಸುರೇಶ್.
ಆದರೆ ಕತೆ, ಕವಿತೆಗಳ ಬರವಣಿಗೆಗೆ ಈವರೆಗೂ ತೊಡಗದೇ ಇದ್ದ ಸುರೇಶ್ ಅಚಾನಕ್ ಒಂದು ಕತೆ ಬರೆದು ಅಚ್ಚರಿ ಮೂಡಿಸಿದ್ದಾರೆ. ಕತೆಯ ಹೆಸರು: ಕಾಗದ ಬಂದಿದೆ. ಅಂತರ್ದೇಶಿ ಪತ್ರಗಳ ಸಂಭ್ರಮದ ದಿನಗಳಲ್ಲೇ ಹುಟ್ಟಿ ಬೆಳೆದು ಬಂದ ಸುರೇಶ್, `ಕಾಗದ ಬಂದಿದೆ’ ಕತೆಯ ಮೂಲಕ ಸಂಬಂಧಕ್ಕಿರುವ ಅನೇಕ ಸೂಕ್ಷ್ಮಗಳನ್ನು ಹೇಳಲು ಪ್ರಯತ್ನಿಸಿದ್ದಾರೆ. ನಾವು `ಕಳ್ಳಕುಳ್ಳ’ ಬ್ಲಾಗ್ನಲ್ಲಿ ಈಗಷ್ಟೇ ಪ್ರಾರಂಭಿಸಿರುವ `ತಿಳಿಯ ಹೇಳುವೆ ಇಷ್ಟಕತೆಯನು’ ಮಾಲಿಕೆಯಲ್ಲಿ `ಕಾಗದ’ ಕತೆಯನ್ನು ಪ್ರಕಟಿಸುತ್ತಿದ್ದೇವೆ. ಓದಿ.
ಸಂಪೂರ್ಣ ಓದಿಗೆ ಭೇಟಿ ಕೊಡಿ- ಕಳ್ಳ ಕುಳ್ಳ




0 Comments