೨೦೧೯ ನೇ ಸಾಲಿನ ವಿಭಾ ಸಾಹಿತ್ಯ
ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-೨೦೧೯’ ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.
ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.
ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಆಗಷ್ಟ್ ೨೦.
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;
ಪ್ರಕಾಶ ಸುನಂದಾ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೧೯
ನಂ. ೯೦, ‘ನಾಗಸುಧೆ ಜಗಲಿ’
೬/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- ೫೮೦೦೩೧
ದೂರವಾಣಿ; ೯೮೪೫೭೭೯೩೮೭.






0 Comments