ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಣ್ಣ ಮಕ್ಕಳ ಕಣ್ಣುಗಳು ನೋಡಲಾಗದೆ ನಾಚಿ ಮುಚ್ಚಿಕೊಂಡವು

ಮಂಗಳೂರಿನಲ್ಲಿ ನಡೆದ ಹೇಯ ಕೃತ್ಯವನ್ನು ನೋಡಿದಾಗ ಇಟಗಿ ಈರಣ್ಣ ಅವರು “ರಾವೀ ನದಿಯ ದಂಡೆಯ ಮೇಲೆ” ನಾಟಕಕ್ಕೆ ಬರೆದ ಒಂದು ಗಝಲ್ ನೆನಪಿಗೆ ಬಂತು..

– ಧನ೦ಜಯ ಕುಲಕರ್ಣಿ “ಶಹರ ಶಹರಗಳಲ್ಲಿ ಸಾಲು ಸಾಲಾಗಿ ಸಾಲು ಮನೆಗಳನೆಲ್ಲ ಸುಡಲಾಯಿತು ಸಂತಸದ ಹಬ್ಬವಿದು, ತಾನಿಂತು ಉಕ್ಕಿ, ಭೋರ್ಗರೆವ ಕಡಲಾಯಿತು ಒಂದೆಡೆಗೆ ತೂಗಿ ತೊನೆಯುತ್ತಾ ಬಂತು ಋತು ವಸಂತದ ಉಲ್ಲಾಸ ಒಂದೆಡೆಗೆ ಕಂಡ ಕನಸುಗಳ ಗೂಡಿಗೆ ಉರಿವ ಕೊಳ್ಲಿಗಳ ಇಡಲಾಯಿತು ‘ಶೀಲ-ದೀಪ’ ವ ಹೊತ್ತ ಹಣತೆಗಳ ಕಥೆಯನೆಂತು ಬಣ್ಣಿಸಲಿ ನಾನು? ನಡುಬೀದಿಯಲ್ಲೇ ಎಣ್ಣೆಯನು ಚೆಲ್ಲಿ, ಕುಡಿಚಿವುಟಿ ಹೊಸಕಿ ಬಿಡಲಾಯಿತು ಸಣ್ಣ ಮಕ್ಕಳ ಕಣ್ಣುಗಳು ನೋಡಲಾಗದೆ ನಾಚಿ ಮುಚ್ಚಿಕೊಂಡವು ಗೆಳೆಯ ಅವರ ಆನಂದಗಳ ಹಗಲು ದರೋಡೆಯೇ ನಡೆದು ಕೊಳ್ಲಿಗಳ ರಾಶಿ ಇಡಲಾಯಿತು ಇಂದಿನ ಈ ಸಮಯದೊಂದಿಗೆ, ಈ ನನ್ನ ಹೆಸರನು ಹೇ ನಾಸಿರ್ ಕಸ ಕಡ್ಡಿ ಕೊಳೆ ಮಾಡಿ, ಕೆಸರಲ್ಲಿ ಹೊಸಕಿ, ಕಾಲುವೆಗೆ ತಳ್ಳಿ ಬಿಡಲಾಯಿತು…”]]>

‍ಲೇಖಕರು G

1 August, 2012

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading