ಎಂ ಎಸ್ ಶ್ರೀರಾಂ ಬರೆದ ’ನರೇಗಾ, ಒಂದು ರೂಪಾಯಿಗೆ ಕಿಲೋ ಅಕ್ಕಿ ಮತ್ತು ಸೋಮಾರಿತನ’ ಲೇಖನಕ್ಕೆ ಬಂದ ಮತ್ತೊಂದು ಪ್ರತಿಕ್ರಿಯೆ ಇಲ್ಲಿದೆ.
ನಿಮ್ಮ ಅಭಿಪ್ರಾಯಗಳಿಗೆ ಸ್ವಾಗತ.
ಅಶೋಕ್ ಕೆ ಆರ್

ಅಪೌಷ್ಟಿಕತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬಿ.ಪಿ.ಎಲ್ ಕಾರ್ಡುದಾರರಿಗೆ ಉಚಿತ / ಅತಿ ಕಡಿಮೆ ದರಕ್ಕೆ ಅಕ್ಕಿ, ಬೇಳೆ, ಜೋಳ, ರಾಗಿ ನೀಡುವುದು ಒಪ್ಪತಕ್ಕ ವಿಚಾರವಾದರೂ ಅದಕ್ಕೆ ‘ಭಾಗ್ಯ’ ಎಂದು ಹೆಸರಿಸುವ ಅನಿವಾರ್ಯತೆ ಏನಿದೆ?
ಅಪೌಷ್ಟಿಕತೆ ಹೋಗಲಾಡಿಸುವುದು ಸರಕಾರದ ಕರ್ತವ್ಯ ಮತ್ತು ಪೌಷ್ಟಿಕ ಆಹಾರವನ್ನು ಬಯಸುವುದು ಪ್ರತಿಯೊಬ್ಬ ನಾಗರೀಕನ ಹಕ್ಕು. ‘ಭಾಗ್ಯ’ ಎಂದು ಹೆಸರಿಡುವಲ್ಲಿ ವರ್ಗ ತಾರತಮ್ಯದ ದರುಶನವಾಗುತ್ತದೆ.
ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರಿಗೆ ಅನಿಲ ಭಾಗ್ಯ ಎಂಬ ಹೆಸರಿದೆಯೇ?
ಮಧ್ಯಮವರ್ಗದವರು ಪಡೆದುಕೊಳ್ಳುವ ಸೌಲತ್ತುಗಳಿಗೆ ಇಲ್ಲದ ‘ಭಾಗ್ಯ’ವೆಂಬ ನಾಮಧೇಯ ಬಡವರ ಯೋಜನೆಗಳಿಗೆ ಮಾತ್ರ ಇರುವುದ್ಯಾಕೆ?
ನಮ್ಮ ಕೃಪೆಯಿಂದ ನೀವು ಬದುಕಿದ್ದೀರಿ ಎಂಬ ದಾರ್ಷ್ಟ್ಯವಿಲ್ಲದೆ ಹೋದರೆ ಈ ರೀತಿಯ ಹೆಸರಿಡಲು ಸಾಧ್ಯವೇ?






keval bagya anno hesru ittiddkkkagi nivu e pratikriye nididdiri annodadre swagata ashok avare.edi rajayave bagya yaru anno hudukatadllide. sikkaga, avru bettiyadaga matadisona bidi. badavarige ondu hottina anna kottvanu, kottavru yaru daridraragilla. astakku badavarige kodo akki mele janakke istyake dodda kannu bitto yeno. irli kelavara kannu biddu bagyada anna unadavana hotte kedadiddre aste saku.