ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹೊಸ ರೂಪ ಹೊತ್ತ ರೆಬೆಲ್ ಸ್ಟಾರ್ ಬಯೋಗ್ರಫಿ!!

ಶರಣು ಹುಲ್ಲೂರು

ವಿಶ್ವ ಪುಸ್ತಕ ದಿನದಂದು ಕನ್ನಡದ ಹೆಸರಾಂತ ನಟ, ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಬಯೋಗ್ರಫಿ ಹೊಸ ರೂಪ ಪಡೆದುಕೊಂಡಿದೆ. 2018ರಲ್ಲಿ ಬಿಡುಗಡೆಯಾದ ಈ ಪುಸ್ತಕವನ್ನು ನಾಡಿನ ಹೆಸರಾಂತ ಪ್ರಕಾಶನ ಸಂಸ್ಥೆ ಸಾವಣ್ಣ ಪ್ರಕಾಶನ ಈ ಪುಸ್ತಕವನ್ನು ಹೊರತಂದಿತ್ತು.

ಈಗ ಎರಡನೇ ಮುದ್ರಣ ಕೂಡ ಅದೇ ಪ್ರಕಾಶನ ಸಂಸ್ಥೆಯಿಂದ ಹೊರ ಬಂದಿದೆ. ಮಂಡ್ಯದಲ್ಲಿ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಪುಸ್ತಕವನ್ನು ಸಂಸದೆ ಸುಮಲತಾ ಅಂಬರೀಶ್, ರಾಕಿಂಗ್ ಸ್ಟಾರ್ ಯಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರು ಬಿಡುಗಡೆ ಮಾಡಿದ್ದರು. ಎರಡನೇ ಮುದ್ರಣದ, ಹೊಸ ವಿನ್ಯಾಸ ಮತ್ತು ಹೊಸ ಮುಖಪುಟ ಹೊತ್ತು ಪುಸ್ತಕವನ್ನು ನಾನು ಮತ್ತು ಪ್ರಕಾಶಕ ಸಾರ್ ಸರಳವಾಗಿ ಬಿಡುಗಡೆ ಮಾಡಿದ್ದೇವೆ. ಈ ಪುಸ್ತಕಕ್ಕೆ ಅಪಾರ ಜನಮನ್ನಣೆ ಸಿಕ್ಕಿತು. ಅಲ್ಲದೇ ಕರ್ನಾಟಕ ಸರಕಾರ ನೀಡುವ ಚಲನಚಿತ್ರ ಸಾಹಿತ್ಯ ರಾಜ್ಯ ಪ್ರಶಸ್ತಿ ಕೂಡ 2018ರಲ್ಲಿ ಬಂದಿದೆ. ಈ ಪುಸ್ತಕ ಎಲ್ಲ ಮಳಿಗೆಗಳಲ್ಲೂ ಲಭ್ಯ. ಸಾವಣ್ಣ ಪ್ರಕಾಶನದಲ್ಲೂ ಲಭ್ಯ.

‍ಲೇಖಕರು Avadhi

23 April, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading