೨೦೧೪ರ ’ಅಮ್ಮ ಪ್ರಶಸ್ತಿ’ ಪ್ರಕಟ

ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರು ಪ್ರತಿಷ್ಠಾನ(ರಿ)

ಸೇಡಮ್ – ಕಲಬುರಗಿ – ಕರ್ನಾಟಕ

(`ಅಮ್ಮ ಪ್ರಶಸ್ತಿ’ಗೆ ಹದಿನಾಲ್ಕನೇ ವರ್ಷದ ಸಂಭ್ರಮ)

ಸೇಡಂನಲ್ಲಿ ನ.26ಕ್ಕೆ `ಅಮ್ಮ ಪ್ರಶಸ್ತಿ’ ಪ್ರದಾನ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ `ಅಮ್ಮ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ, ಲೇಖಕ ಸಿ.ಎನ್.ರಾಮಚಂದ್ರನ್, ನಾಟಕಕಾರ ಗೋಪಾಲ ವಾಜಪೇಯಿ, ಲೇಖಕ ಡಾ.ಕಾಶಿನಾಥ ಅಂಬಲಗೆ, ಲೇಖಕಿ ಸಂಧ್ಯಾರಾಣಿ ಮತ್ತು ಕವಿ ಪ್ರವರ ಬಳ್ಳಾರಿ ಅವರ ಕೃತಿಗಳು ಆಯ್ಕೆಯಾಗಿವೆ ಎಂದು `ಅಮ್ಮ ಪ್ರಶಸ್ತಿ’ ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರು ಪ್ರಕಟಿಸಿದರು.

ನಗರದ ಕನ್ನಡ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು

ಸಿ.ಎನ್.ರಾಮಚಂದ್ರನ್ ಅವರ `ನೆರಳುಗಳ ಬೆನ್ನುಹತ್ತಿ’ (ಆತ್ಮಕಥನ)

ಗೋಪಾಲ ವಾಜಪೇಯಿ ಅವರ `ನಂದಭೂಪತಿ’ (ನಾಟಕ-ಅನುವಾದ)

ಡಾ.ಕಾಶಿನಾಥ ಅಂಬಲಗೆ ಅವರ `ಗಜಲೋತ್ಸವ’ (ಗಜಲ್ ಸಂಕಲನ)

ಲೇಖಕಿ ಸಂಧ್ಯಾರಾಣಿ ಅವರ `ಜೋಗಿ ರೀಡರ್’ (ವಾಚಿಕೆ ಸಂಪಾದನೆ)

ಮತ್ತು

ಯುವ ಕವಿ ಪ್ರವರ ಕೊಟ್ಟೂರು ಬಳ್ಳಾರಿ ಅವರ `ಅಜೀಬು ದುನಿಯ’ (ಕವನ ಸಂಕಲನ)

ಕೃತಿಗಳನ್ನು 14 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ತಲಾ 5000 ರೂ. ನಗದು ಪುರಸ್ಕಾರ, ನೆನಪಿನ ಕಾಣಿಕ, ಪ್ರಮಾಣ ಪತ್ರ ಮತ್ತು ಸತ್ಕಾರ ಒಳಗೊಂಡಿರುತ್ತದೆ.
ಇದೇ ನವೆಂಬರ್ 26 ರಂದು ಸಂಜೆ 5.30ಕ್ಕೆ ಸೇಡಮ್ನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ಸಮಾರಂಭದಲ್ಲಿ ಅಮ್ಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಮ್ಮ ಗೌರವ ಪುರಸ್ಕಾರ :
ಕಳೆದ ಐದು ವರ್ಷಗಳಿಂದ ಆರಂಭಗೊಂಡ `ಅಮ್ಮ ಗೌರವ ಪುರಸ್ಕಾರ’ಕ್ಕೆ ಈ ಬಾರಿಯೂ ನಾಡು-ನುಡಿಗೆ ನೀಡಿದ ಕೊಡುಗೆಯನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಸತ್ಕರಿಸಲಾಗುತ್ತದೆ.

ಈ ಬಾರಿಯ ಅಮ್ಮ ಗೌರವ ಪುರಸ್ಕಾರಕ್ಕೆ ಜರ್ಮನಿ ವಿವಿಯ ಕುಲಪತಿ ಮತ್ತು ಹಿರಿಯ ಸಾಹಿತಿ ಬಿ.ವಿ.ವಿವೇಕ ರೈ,

ವಿಮರ್ಶಕ ಡಾ.ಶ್ರೀಶೈಲ ನಾಗರಾಳ

ಕಥೆಗಾರ ಡಾ.ಶಿವರಾಮ ಅಸುಂಡಿ

ಪತ್ರಕರ್ತೆ ಎಚ್.ಎನ್.ಆರತಿ


ಹಾಗೂ ಸೇಡಂನ ಶಿವಯ್ಯ ಸ್ವಾಮಿ ಬಿಬ್ಬಳ್ಳಿ

ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರು ತಿಳಿಸಿದ್ದಾರೆ.

ಅಮ್ಮ ಪ್ರಶಸ್ತಿಗೆ ಹದಿನಾಲ್ಕನೇ ವರ್ಷದ ಸಂಭ್ರಮ : ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರು ಅವರು ತಮ್ಮ ಅಮ್ಮನ ನೆನಪಿನಲ್ಲಿ ಸ್ಥಾಪಿಸಿದ ಅಮ್ಮ ಪ್ರಶಸ್ತಿಗೆ ಈಗ ಹದಿನಾಲ್ಕನೇ ವರ್ಷದ ಸಂಭ್ರಮ. ಕನ್ನಡದ ಪ್ರತಿಭಾವಂತ ಬರಹಗಾರರು ಅಮ್ಮ ಪ್ರಶಸ್ತಿಗಾಗಿ ತಮ್ಮ ಕೃತಿಗಳನ್ನು ಕಳುಹಿಸುವ ಮೂಲಕ ಪ್ರಶಸ್ತಿಯನ್ನು ಗುರುತಿಸಿದ್ದಾರೆ ಹಾಗೂ ಗೌರವಿಸಿದ್ದಾರೆ. ಈ ಬಾರಿ 329 ಕೃತಿಗಳು ಬಂದಿದ್ದವು.
ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರು ಪ್ರತಿಷ್ಠಾನದ ಅಮ್ಮ ಪ್ರಶಸ್ತಿ ರಾಜ್ಯದ ಗಣನೀಯ ಪ್ರಶಸ್ತಿಗಳಲ್ಲಿ ಒಂದಾಗಬೇಕು ಎಂಬ ಪ್ರತಿಷ್ಠಾನದ ಆಶಯಕ್ಕೆ ಅನುಗುಣವಾಗಿ ನಾಡಿನ ಖ್ಯಾತ ಲೇಖಕರು, ಕವಿಗಳು, ಪ್ರಕಾಶಕರು ಮತ್ತು ಲೇಖಕರ ಅಭಿಮಾನಿ ಓದುಗರು ಸ್ಪಂದಿಸಿದ್ದೇ ಇದೊಂದು ಗೌರವಾನ್ವಿತ ಪ್ರಶಸ್ತಿಯಾಗಿ ರೂಪುಗೊಂಡಿದೆ ಎಂಬುದಕ್ಕೆ ಸಾಕ್ಷಿ.
ದಶಮಾನೋತ್ಸವ ವರ್ಷದಿಂದ ಆರಂಭಗೊಂಡ ಅಮ್ಮ ಗೌರವ ಪುರಸ್ಕಾರವನ್ನು ಮುಂದುವರಿಸಲಾಗಿದೆ. ಐವರಿಗೆ ಅಮ್ಮ ಪ್ರಶಸ್ತಿ ಹಾಗೂ ಅಮ್ಮ ಗೌರವ ಪುರಸ್ಕಾರ ನೀಡಲಾಗುತ್ತಿದೆ ಎಂದು ಮಹಿಪಾಲರೆಡ್ಡಿ ಮುನ್ನೂರು ತಿಳಿಸಿದ್ದಾರೆ.
 

‍ಲೇಖಕರು G

November 13, 2014

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

11 ಪ್ರತಿಕ್ರಿಯೆಗಳು

  1. ಕುಸುಮಬಾಲೆ

    ಎಲ್ಲರಿಗೂ ಅಭಿನಂದನೆಗಳು.

    ಪ್ರತಿಕ್ರಿಯೆ
  2. vasudev nadig

    pratubhavantharige prashastigalu doraki prashastige heege artha barali…ellariguuu cngrts

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: