ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

2022 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ…

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-೨೦೨೨’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ ೧೫.

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;

ಸುನಂದಾ ಮತ್ತು ಪ್ರಕಾಶ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೨೨
ನಂ. ೯೦, ‘ನಾಗಸುಧೆ ಜಗಲಿ’
೬/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- ೫೮೦೦೩೧
ದೂರವಾಣಿ; ೯೮೪೫೭೭೯೩೮೭.

‍ಲೇಖಕರು Admin

8 June, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading