ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವಿವೇಕ ಶಾನಬಾಗ್ recommends..

ಕನ್ನಡ ಯುವ ಬರಹಗಾರರಿಗೆ ಟಿ.ಎಫ್.ಎ ಪುರಸ್ಕಾರ

  ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಕಳೆದ ಎರಡು ವರ್ಷಗಳಿಂದ ಕನ್ನಡಕ್ಕೂ ವಿಸ್ತಾರಗೊಂಡಿದೆ. ಈ ಪ್ರಶಸ್ತಿಯನ್ನು ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts  – TFA) ಸಂಸ್ಥೆಯು ಸ್ಥಾಪಿಸಿ ನಿರ್ವಹಿಸುತ್ತಿದೆ. ಈ ಪ್ರಶಸ್ತಿಯು ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾಗಿದೆ. 2013 ನೇ ಸಾಲಿನ ಕನ್ನಡ ಟೊಟೊ ಪುರಸ್ಕಾರಕ್ಕಾಗಿ ಟಿ.ಎಫ್.ಎ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ. ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. 1 ಜನವರಿ 1983 ರ ನಂತರ ಹುಟ್ಟಿದವರು ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗಳನ್ನು ಕಳಿಸಲು ಅರ್ಹರು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದ ಕನ್ನಡ ರಚನೆಗಳನ್ನು ಪ್ರವೇಶಗಳಾಗಿ ಕಳಿಸಬಹುದು. ಪುರಸ್ಕಾರದ ಆಯ್ಕೆಯನ್ನು ಕನ್ನಡದ ಹಿರಿಯ ಬರಹಗಾರರ ಸಮಿತಿಯು ಮಾಡಲಿದೆ. ಪುರಸ್ಕೃತರು 25000 ರೂಪಾಯಿಗಳ ನಗದು ಬಹುಮಾನವನ್ನು ಪಡೆಯುವರು. ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2012.

ಟಿ.ಎಫ್.ಎ. ಸಂಸ್ಥೆಯು ಆಂಗಿರಸ `ಟೊಟೊ` ವೆಲ್ಲಾನಿಯ ಸ್ಮರಣಾರ್ಥ 2004 ರಲ್ಲಿ ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳಿಗೆ ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಕಂಡುಕೊಳ್ಳಲು ಉತ್ತೇಜನ ಸಿಗಲೆಂಬುದು ಇದರ ಆಶಯವಾಗಿದೆ. ಟೊಟೊ ವಾರ್ಷಿಕ ಪ್ರಶಸ್ತಿಗಳನ್ನು ಛಾಯಾಚಿತ್ರ, ಸಂಗೀತ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರಗಳಿಗೆ ಕೊಡಲಾಗುತ್ತದೆ. ಪ್ರಶಸ್ತಿಯ ಪ್ರವೇಶದ ವಿವರಗಳನ್ನು http://totofundsthearts.blogspot.com ಎಂಬ ತಾಣದಿಂದ ಪಡೆಯಬಹುದು.]]>

‍ಲೇಖಕರು G

13 August, 2012

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading