I am with ವಿದ್ಯಾ ದಿನಕರ್

ಅನ್ಬಿಲೀವೆಬಲ್ ವಿದ್ಯಾ

samvartha

ಸಂವರ್ತ ‘ಸಾಹಿಲ್’

ಆದಷ್ಟು ಬೇಗ ವರದಿ ಬರೆದು ಕಳುಹಿಸಿ ಆಫೀಸ್ ಬಿಟ್ಟ ನಾನು ನೇರವಾಗಿ ದೆಹಲಿಯ ಪರಿಸರವಾದಿ ಓರ್ವರು ತಂಗಿದ್ದ ಹೋಟೆಲಿಗೆ ಹೋದೆ. ಅಂದು ಅನಿರೀಕ್ಷಿತವಾಗಿ ಮಳೆ ಸುರಿದಿತ್ತು. ನನ್ನ ಬಟ್ಟೆ-ಮೈ ಒಂದಿಷ್ಟು ಒದ್ದೆ ಆಗಿತ್ತು. ಅವರ ರೂಂ ಪ್ರವೇಶ ಮಾಡುತ್ತಿದ್ದಂತೆ ಅಲ್ಲಿ ಆಗಲೇ ಉಪಸ್ಥಿತರಿದ್ದು ಪರಿಸರವಾದಿ ಹೋರಾಟಗಳ ಕುರಿತು ಚರ್ಚೆ ನಡೆಸುತ್ತಿದ್ದ ವಿದ್ಯಾ ದಿನಕರ್ ನನ್ನನ್ನು ನೋಡಿ, “ಮಳೆ ಬರ್ತಾ ಇದೆಯಾ?” ಎಂದು ಕೇಳಿದಳು. ನಾನು ಹ್ಞೂ ಎನ್ನಲು ತನ್ನ ಕುರ್ಸಿಯಿಂದ ಎದ್ದು ಕಿಡಕಿಯ ಪರದೆ ಸರಿಸುತ್ತ, “ಕುಡುಬಿ ಪದವುನಲ್ಲಿ ಮಳೆ ಬರ್ತಾ ಇದೆ. ಇಲ್ಲಿ ಸಹ ಬರ್ತಾ ಇರೋದು ಗೊತ್ತಾಗ್ಲಿಲ್ಲ,” ಎಂದು ಹೊರ ನೋಡಿ, “ಹೌದು ಇಲ್ಲಿ ಸಹ ಮಳೆ ಬರ್ತಾ ಇದೆ,” ಎಂದು ತನಗೆ ತಾನೆ ಹೇಳಿಕೊಂಡಳು.

ತಾನು ಇರುವ ಪ್ರದೇಶದಲ್ಲಿ ಸುಯ್ಯುತ್ತಿರುವ ಮಳೆ ತಿಳಿಯದಿದ್ದರೂ ತಾನು ಹೋರಾಡುತ್ತಿರುವ ಕುಡುಬಿಗಳ ನೆಲದ ಮೇಲೆ ಸುರಿಯುತ್ತಿರುವ ಮಳೆಯ ಸುದ್ದಿ ತಿಳಿದಿದ್ದ ಆಕೆಯನ್ನು ನಂಬಲಾರದಂತೆ ನಿಂತು ಅರೆಕ್ಷಣ ನೋಡಿದೆ. “ಯು ಆರ್ ಅನ್ಬಿಲೀವೆಬಲ್” ಎಂದು ಹೇಳಿ ಅಲ್ಲೇ ಇದ್ದ ಖಾಲಿ ಕುರ್ಚಿಯ ಮೇಲೆ ಕುಳಿತುಕೊಂಡೆ.

ದೆಹಲಿ ಮೂಲದ ಪರಿಸರವಾದಿ ಹೋರಾಟಗಾರರೊಂದಿಗೆ ವಿದ್ಯಾ ಮತ್ತು ನಾನು ಚರ್ಚೆ ಮಾಡುತ್ತಾ ಕೂತಿದ್ದಾಗ ನಡುವಿನಲ್ಲಿ ಒಮ್ಮೆ ಅವರು, “ಇತ್ತೀಚಿಗೆ ಯಾರೋ ಹೇಳುತ್ತಾ ಇದ್ದರು ನೋಡು ಮಂಗಳೂರಿನಲ್ಲಿ ಇರೋದು ಒಂದೇ ಒಂದು ಗಂಡಸು, ಅದು ವಿದ್ಯಾ,” ಎಂದು ನೆನಪಿಸಿಕೊಂಡು ನಕ್ಕರು. ತಾನೂ ನಕ್ಕ ವಿದ್ಯಾ ತಕ್ಷಣಕ್ಕೆ, “ನಾನು ಗಂಡಲ್ಲ ನಾನು ಹೆಣ್ಣೇ ಗಂಡಾಗುವ ಅವಶ್ಯಕತೆ ಇಲ್ಲ,” ಎಂದು ನಗು ಮುಂದುವರೆಸಿದ್ದಳು.

ಇದಾಗಿ ಕೆಲವು ಸಮಯದಲ್ಲಿ ಕುಡುಬಿ ಪದವುಗೆ ವಿದ್ಯಾ ಮತ್ತು ನಾನು ಹೋದಾಗ ಎಸ್.ಈ.ಝೆಡ್. ನೇಮಿಸಿದ ಜನರು ನಮ್ಮ ವಾಹನವನ್ನು ಸುತ್ತುವರೆದು ಗಲಾಟೆ ಆರಂಬವಾಯಿತು. ನಮ್ಮ ಗಾಡಿಯ ಚಕ್ರದ ಗಾಳಿಯನ್ನು ತೆಗೆದರು. ಸೂಕ್ತ ಸಮಯಕ್ಕೆ ದೌಡಾಯಿಸಿಕೊಂಡು ಬಂದ ಗೆಳೆಯ ನವೀನ ಸೂರಿಂಜೆ ನಮ್ಮನ್ನು ಮರಳಿ ಮಂಗಳೂರಿಗೆ ಕರೆದುಕೊಂಡು ಹೋದ. ಅಲ್ಲಿ ಅಂದು ನನ್ನ ಕೈಕಾಲು ನಡುಗಿದ್ದು ಸುಳ್ಳಲ್ಲ. ಆದರೆ ಆ ಗಲಾಟೆಯ ಸಂದರ್ಭದಲ್ಲೂ ಬೆಚ್ಚದೆ ನಿಂತಿದ್ದಳು ಈ ವಿದ್ಯಾ.

ಕುಡುಬಿಗಳ ನ್ಯಾಯಕ್ಕಾಗಿ ನಡೆಸುವ ಹೋರಾಟದಲ್ಲಿ ಪೇಜಾವರ ಮಠದ ವಿಶ್ವೇಶನನ್ನು ಒಳಗೊಂಡಾಗ ವಿದ್ಯಾ ಜೊತೆ ಗಲಾಟೆ ಮಾಡಿದ ಕೆಲವು ಮಂದಿಯಲ್ಲಿ ನಾನು ಒಬ್ಬ. ಆಗ ಆಕೆ, “ನಿನ್ನ ಅಪನಂಬಿಕೆ ನಿನ್ನ ನಿಲುವೆ ಇವೆಲ್ಲಕ್ಕಿಂತ ಮುಖ್ಯ ಜನರ ನೆಲ ಜನರ ಬದುಕು,” ಎಂದು ಹೇಳಿ ಹೋರಾಟ ಮುಂದುವರೆಸಿದ್ದಳು. ವಿಶ್ವೇಶನನ್ನು ಆಕೆ ದಾಳವಾಗಿ ಉಪಯೊಗಿಸಿಕೊಂಡಳೇ ಎಂಬ ಪ್ರಶ್ನೆ ನನಗೆ ನಾನೇ ಹಾಕಿಕೊಂಡದ್ದಿದೆ. ಆದರೆ ಆ ಪ್ರಶ್ನೆಯೇ ಸರಿಯಲ್ಲ. ಆಕೆ ಕುಡುಬಿ ಜನರ ಭಾವನೆಗೆ ಬೆಲೆ ನೀಡಿದ್ದಳು ಎಂಬುದು ಮಾತ್ರ ಸತ್ಯ ಅವರ ಬದುಕಿಗೆ ಅವರ ನೆಲಕ್ಕೆ ಬೆಲೆ ನೀಡಿದ್ದಳು. ಹಾಗೆಂದು ವಿಶ್ವೇಶನಿಗೆ ಅಗೌರವ ತೋರಿದ್ದಿಲ್ಲ. ಅಂದ ಮಾತ್ರಕ್ಕೆ ಆರಾಧಿಸಿದ್ದೂ ಇಲ್ಲ.

ಗ್ರೆಗೊರಿ ಪತ್ರಾವ್ ಮನೆ ಉರುಳಿಸಲಾದ ಸಂದರ್ಭದಲ್ಲಿಯೂ ಪೋಲೀಸರ ಆರ್ಭಟಕ್ಕೆ ಎದುರಾಗಿ ದಿಟ್ಟವಾಗಿ ನಿಂತ ವಿದ್ಯಾ ಪಬ್ ದಾಳಿ ನಡೆದ ಬಳಿಕ ಅನೈತಿಕ ಪೋಲೀಸರನ್ನು ಸಹ ಅಷ್ಟೇ ದಿಟ್ಟವಾಗಿ ಎದುರಿಸಿದ್ದಳು. ಇಂಥಾ ಅಂಜದ ವಿದ್ಯಳಿಗಾಗಿ ಈಗ ನನ್ನ ಹೃದಯ ಅಂಜುತ್ತಿದೆ. ಅದಕ್ಕೆ ಕಾರಣ ಬಜರಂಗ ದಳದ ಗೂಂಡಾಗಳು ಅವಳ ಕುರಿತಾಗಿ ಅವಾಚ್ಯವಾಗಿ ಬಯ್ದು ಆಕೆಗೆ ಜೀವ ಬೆದರಿಕೆ ಒಡ್ಡಿರುವುದು.

ಇಂತಾ ಬೆದರಿಕೆಗಳು ಹಿಂದೆಯೂ ಬಂದಿದ್ದವು ಆಗ “ವಿದ್ಯಾ ಎಲ್ಲವನ್ನೂ ಎದಿರಿಸುತ್ತಾಳೆ” ಎಂದು ಅನ್ನಿಸುತ್ತಿತ್ತು. ಆದರೆ ಈಗಿನ ಪರಿಸ್ಥಿತಿಯೇ ಭಿನ್ನ. ದಾಳಿಯ ಬೆದರಿಕೆ ಹಾಕಿದ ಭುವಿತ್ ಶೆಟ್ಟಿ ಕೊನೆಗೂ ಕೊಲೆ ಮಾಡಿಬಿಟ್ಟ. ಆಗಲೂ ಪೊಲೀಸರು ಕಾರ್ಯ ನಿರ್ವಹಿಸಲಿಲ್ಲ. ಈಗಲೂ ನಿರ್ವಹಿಸುತ್ತಿಲ್ಲ. ಇಲ್ಲಿ ಮತ್ತೊಬ್ಬ ಭುವಿತ್ ಶೆಟ್ಟಿ ಉದ್ಭವಿಸಲು ಸಾಧ್ಯ ಇಲ್ಲ ಎಂದು ಹೇಗೆ ನಂಬಲಿ? ಯಾವುದೇ ಅಂಜಿಕೆಯಿಲ್ಲದೆ ಬೆದರಿಕೆ ಒಡ್ಡುವ ಮಂದಿ ಇದ್ದಾರೆ, ಅವರಿಗೆ ಬೆಂಬಲ ಇದೆ, ಪೋಲೀಸರ ನಿಷ್ಕ್ರಿಯತೆಯೂ ಇದೆ.

ಐ ಆಮ್ ವಿಥ್ ವಿದ್ಯಾ ದಿನಕರ್

 

‍ಲೇಖಕರು admin

December 25, 2015

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

5 ಪ್ರತಿಕ್ರಿಯೆಗಳು

  1. ಗುಡ್ಡ

    >> ಪೇಜಾವರ ಮಠದ ವಿಶ್ವೇಶನನ್ನು<<

    ಇಂತಹ ಶಬ್ದಗಳಿಂದ ನಿಮ್ಮ ಬರಹದ ಗಾಂಭೀರ್ಯ ಕಮ್ಮಿ ಆಗಿದೆ.

    ಪ್ರತಿಕ್ರಿಯೆ
    • ಟಿ.ಕೆ.ಗಂಗಾಧರ ಪತ್ತಾರ.

      ಹೌದು, ಗೌರವಕ್ಕಲ್ಲದಿದ್ದರೂ ಸೌಜನ್ಯಕ್ಕಾಗಿಯಾದರೂ ಇಂತಹ ನಿಮ್ಮ ವ್ಯಕ್ತಿತ್ವದ ಗಂಭೀರತೆಯನ್ನು ಕಡಿಮೆ ಮಾಡಬಹುದಾದ ಶಬ್ದಗಳನ್ನು ಬಳಸದಿರಿ.

      ಪ್ರತಿಕ್ರಿಯೆ
  2. ಎಂ.ಸಿ. ನಿಂಗಪ್ಪ ಹಟ್ಟಿ ಚಿನ್ನದ ಗಣಿ

    ಸಂವರ್ಥ ಸಾಹಿಲ್ ಅವರು ಬರೆದಿದ್ದು ಸರಿಯಾಗಿದೆ.

    ಪ್ರತಿಕ್ರಿಯೆ
  3. B T Jahnavi

    ಕಷ್ಟದಲ್ಲಿರುವ ಜನ, ಅವರ ಬದುಕು ಈ ಎಲ್ಲದರ ಬಗ್ಗೆ ಇಷ್ಟೊಂದು ಕಾಳಜಿ ಇರುವ ವಿದ್ಯಾ ನಿಜಕ್ಕೂ ಎದೆಗಾರ್ತಿ. ಇಡೀ ದೇಶದಲ್ಲಿ ಯಾವೊಬ್ಬರೂ ಮಾಡದ ಧೈರ್ಯವನ್ನ ಆಕೆ ಮಾಡಿದ್ದಾಳೆ, ಯಾರೂ ಇಡದ ಹೆಜ್ಜೆಯನ್ನ ಆಕೆ ಇಟ್ಟಿದ್ದಾಳೆ. ಅದಕ್ಕೆ ಆಕೆಗೊಂದು ಸಲ್ಯೂಟ್. ಬಹುಶಃ ದಿಲ್ವಾಲೆ ಸಿನೆಮಾದಲ್ಲಿ ಇನ್ವಾಲ್ ಆಗಿರುವ ನೂರಾರು ಜನರ ಹೊಟ್ಟೆಯ ಮೇಲೆ ಬಿದ್ದಿರುವ ಹೊಡೆತ , ಅವರ ಶ್ರಮಕ್ಕೆ ಬೀಳಲಿರುವ ಪೆಟ್ಟು ಇದೇ ಆಕೆಯನ್ನು ಈ ದಿಟ್ಟ ಹೆಜ್ಜೆ ಇಡಲು ಪ್ರೇರೇಪಣೆ ನೀಡಿದೆಯೇ ಹೊರತು ಶಾರುಖ್ ಖಂಡಿತವಾಗಿಯೂ ಅಲ್ಲಾ. ವಿದ್ಯಾ ಒಳಗಿನ ಈ ಮಾನವೀಯತೆ , ಮನುಷ್ಯರಲ್ಲಿ ಆಕೆಗಿರುವ ಕಾಳಜಿ ಕಳಕಳಿ ಮನುಷ್ಯರಿಗೆ ಮಾತ್ರವೇ ಅರ್ಥವಾಗುವಂತದ್ದು. ಮನುಷ್ಯರು ಭೂಮಿಯ ಮೇಲೆ ಇನ್ನೂ ಉಳಿದುಕೊಂಡಿದ್ದಾರೆ ಅನ್ನೋ ಭರವಸೆ ನನಗಿದೆ. ವಿದ್ಯರನ್ನ ಇವತ್ತು ಕಾಪಾಡಿಕೊಳ್ಳವುದು ಪ್ರತಿಯೊಬ್ಬ ಮನುಷ್ಯನ ಮೇಲಿರುವ ಆದ್ಯ ಕರ್ತವ್ಯ ಮತ್ತು ಹೊಣೆ ಎಂದು ನಾನು ಭಾವಿಸುತ್ತೇನೆ. ಇದಕ್ಕೆ ಎಲ್ಲರೂ ಒಂದಾಗೋಣ, ಒಗ್ಗೂಡೋಣ. ಇದನ್ನು ಕೇವಲ ಮಂಗಳೂರು ಇಲ್ಲವೇ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸದೆ ರಾಷ್ಟ್ರೀಯ ಸುದ್ದಿಯಾಗಿಸ
    ಬೇಕು… ರಾಷ್ಟ ಮಟ್ಟದಲ್ಲೂ ಹೋರಾಟ ಪ್ರತಿಭಟನೆ ನಡೆಯಬೇಕು. ಒಂದು ಹೆಣ್ಣಿನ ಮಾನ ಪ್ರಾಣ ಸಂತೆಯಲ್ಲಿ ಮಾರಾಟಕ್ಕಿಟ್ಟ ವಸ್ತುವಲ್ಲ ಅಥವಾ ಹಾದಿಬೀದಿಯಲ್ಲಿ ಕೈಕಾಲಿಗೆ ತೊಡರುವ ಕಸವಲ್ಲಾ ಎಂಬುದು ಮನವರಿಕೆ ಮಾಡಿಕೊಡಲು ಸಕಾಲ ಇದು.

    ಪ್ರತಿಕ್ರಿಯೆ
  4. Rupa Hassan

    ವಿದ್ಯಾ ಅವರಿಗೆ ನನ್ನ ನೈತಿಕ ಬೆಂಬಲವಿದೆ…….

    ರೂಪ ಹಾಸನ

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: